ರೈತರು ಫ್ರೂಟ್ಸ್ ಐಡಿ ಪಡೆಯುವುದು ಕಡ್ಡಾಯ : ಜಿಲ್ಲಾಧಿಕಾರಿ ಸ್ನೇಹಲ್ ಆರ್.
ಧಾರವಾಡ, 22 ಫೆಬ್ರವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿನ ಎಲ್ಲಾ ಭೂಹಿಡುವಳಿ ಹೊಂದಿರುವ ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಫ್ರೂಟ್ಸ್ ಐಡಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾ
Dc dwd


ಧಾರವಾಡ, 22 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲೆಯಲ್ಲಿನ ಎಲ್ಲಾ ಭೂಹಿಡುವಳಿ ಹೊಂದಿರುವ ರೈತರು ಕಡ್ಡಾಯವಾಗಿ ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಫ್ರೂಟ್ಸ್ ಐಡಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ 2.42 ಲಕ್ಷ ರೈತರು ಫ್ರೂಟ್ಸ್ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡಿದ್ದು, ಅವರಲ್ಲಿ 1.66 ಲಕ್ಷ ರೈತರು ಭೂಹಿಡುವಳಿ ವಿವರಗಳನ್ನು ಹೊಂದಿದ್ದಾರೆ. ಉಳಿದ ರೈತರೂ ತಮ್ಮ ಎಲ್ಲಾ ಜಮೀನಿನ ವಿವರಗಳನ್ನು ಫ್ರೂಟ್ಸ್ ತಂತ್ರಾಂಶಕ್ಕೆ ಜೋಡಣೆ ಮಾಡುವುದು ಕಡ್ಡಾಯವಾಗಿದೆ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸರ್ಕಾರದ ಮಾನದಂಡಗಳ ಪ್ರಕಾರ ಫ್ರೂಟ್ಸ್ ಹಾಗೂ ಭೂಮಿ ನಡುವಿನ ಹೊಂದಾಣಿಕೆ ಅತ್ಯಂತ ಮುಖ್ಯವಾಗಿದೆ. ಕೇಂದ್ರ ಸರ್ಕಾರದ ಪಿ.ಎಂ.ಕಿಸಾನ ಸೇರಿದಂತೆ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪಡೆಯಲು ರೈತರು ಕಡ್ಡಾಯವಾಗಿ ಕೇಂದ್ರ ನೋಂದಾಯಿತ ರೈತ ಸಂಖ್ಯೆಯನ್ನು ಹೊಂದಿರಬೇಕು ಎಂದು ಅವರು ತಿಳಿಸಿದ್ದಾರೆ.

ಜಿಲ್ಲೆಯ ರೈತರು ತಮ್ಮ ಎಲ್ಲಾ ಜಮೀನಿನ ದಾಖಲೆಗಳು ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಹತ್ತಿರದ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಕಚೇರಿಗಳನ್ನು ಸಂಪರ್ಕಿಸಿ ತಕ್ಷಣವೇ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande