
ಚಿಕ್ಕಮಗಳೂರು, 23 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ ಮತ್ತು ನಂತರ ನಡೆದ ಲಾಠಿಪ್ರಹಾರ ಖಂಡಿಸಿ ಶೃಂಗೇರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೊಪ್ಪ, ಎನ್.ಆರ್.ಪುರ ಹಾಗೂ ಶೃಂಗೇರಿ ತಾಲೂಕುಗಳಲ್ಲಿ ಬಂದ್ಗೆ ಕರೆ ನೀಡಲಾಗಿದೆ.
ಹಲವೆಡೆ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿ ಸಂಚಾರ ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ಅಹಿತಕರ ಘಟನೆಗಳನ್ನು ತಪ್ಪಿಸಲು ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬಾಳೆಹೊನ್ನೂರಿನ ಅರಣ್ಯ ಇಲಾಖೆ ಕಚೇರಿ ಎದುರು ಪ್ರತಿಭಟನೆಗೆ ಕರೆ ನೀಡಲಾಗಿದೆ. ಮಾನವ-ಕಾಡಾನೆ ಸಂಘರ್ಷ ಹೆಚ್ಚುತ್ತಿರುವ ಹಿನ್ನೆಲೆ ಶಾಶ್ವತ ಪರಿಹಾರ ಕ್ರಮ ಕೈಗೊಳ್ಳಬೇಕು, ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮ ಜಾರಿಗೆ ತರಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa