ಸಚಿವ ಭೋಸರಾಜು ಭೇಟಿ ಮಾಡಿದ ಬೊಲಿವಿಯಾ ನಿಯೋಗ
ಬೆಂಗಳೂರು, 23 ಫೆಬ್ರವರಿ (ಹಿ.ಸ.): ಆ್ಯಂಕರ್: ಬೊಲಿವಿಯಾ ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಒಮರ್ ಅಲ್ಫ್ರೆಡೊ ಪೆನಲೋಜಾ ಎಸ್ಕಲೇರಾ ನೇತೃತ್ವದ ನಿಯೋಗವು ಸಚಿವ ಎನ್.ಎಸ್. ಭೋಸರಾಜು ಅವರನ್ನು ಭೇಟಿಯಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪರಸ್ಪರ ಸಹಕಾರದ ಕುರಿತು ಮಹತ್ವದ ಚರ್ಚೆ
Meets


ಬೆಂಗಳೂರು, 23 ಫೆಬ್ರವರಿ (ಹಿ.ಸ.):

ಆ್ಯಂಕರ್:

ಬೊಲಿವಿಯಾ ದೇಶದ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಒಮರ್ ಅಲ್ಫ್ರೆಡೊ ಪೆನಲೋಜಾ ಎಸ್ಕಲೇರಾ ನೇತೃತ್ವದ ನಿಯೋಗವು ಸಚಿವ ಎನ್.ಎಸ್. ಭೋಸರಾಜು ಅವರನ್ನು ಭೇಟಿಯಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಪರಸ್ಪರ ಸಹಕಾರದ ಕುರಿತು ಮಹತ್ವದ ಚರ್ಚೆ ನಡೆಸಿತು.

ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಲ್ಲಿ ಕೃತಕ ಬುದ್ಧಿಮತ್ತೆ ಯಂತಹ ಸುಧಾರಿತ ತಂತ್ರಜ್ಞಾನಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ, ರಾಜ್ಯ ಸರ್ಕಾರದ ವತಿಯಿಂದ ಅಗತ್ಯ ಸಹಕಾರ ನೀಡುವುದಾಗಿ ಸಚಿವರು ನಿಯೋಗಕ್ಕೆ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಐಟಿ/ಬಿಟಿ, ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆ ಸರ್ಕಾರದ ಕಾರ್ಯದರ್ಶಿಗಳಾದ ಶ್ರೀಮತಿ ಎನ್. ಮಂಜುಳಾ ಹಾಗೂ ಡಾ. ತುಪ್ಪಿಲ್ ವೆಂಕಟೇಶ್ ಅವರು ಉಪಸ್ಥಿತರಿದ್ದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande