
ಬೆಂಗಳೂರು, 23 ಫೆಬ್ರವರಿ (ಹಿ.ಸ.):
ಆ್ಯಂಕರ್:
ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಡಳಿತ ಪಕ್ಷದ ಪರಿಶಿಷ್ಟ ಪಂಗಡದ ಶಾಸಕರುಗಳು ಮತ್ತು ಸಮುದಾಯದ ಮುಖಂಡರುಗಳ ಜೊತೆಗೆ 2026-27ನೇ ಸಾಲಿನ ಬಜೆಟ್ ಪೂರ್ವ ಸಭೆ ನಡೆಸಿ, ಸಮುದಾಯದ ಬೇಡಿಕೆಗಳನ್ನು ಆಲಿಸಿ, ಸಾಧ್ಯವಾಗುವ ಎಲ್ಲಾ ಬೇಡಿಕೆಗಳಿಗೆ ಬಜೆಟ್‌ನಲ್ಲಿ ಪೂರಕ ಅನುದಾನ ಒದಗಿಸುವುದಾಗಿ ತಿಳಿಸಿದರು.
ಆರ್ಥಿಕ ಸಲಹೆಗಾರರಾದ ಬಸವರಾಜ ರಾಯರೆಡ್ಡಿ, ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಆರ್ಥಿಕ ಇಲಾಖೆಯ ಮುಖ್ಯ ಕಾರ್ಯದರ್ಶಿ ರಿತೇಶ್ ಕುಮಾರ್ ಸಿಂಗ್ ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa