ಕಾಂಗ್ರೆಸ್ ದೇಶದ ಕ್ಷಮೆ ಕೇಳಬೇಕು: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ
ಬೆಂಗಳೂರು, 23 ಫೆಬ್ರವರಿ (ಹಿ.ಸ.): ಆ್ಯಂಕರ್: ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ವರ್ತನೆ ತೀವ್ರ ಆಘಾತಕಾರಿ ಮತ್ತು ಖೇದಕರವಾಗಿದೆ. ಸ್ವಪಕ್ಷದವರೇ ಆ ನಡೆಯನ್ನು ಟೀಕಿಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ನಾಯಕರು ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ
Joshi


ಬೆಂಗಳೂರು, 23 ಫೆಬ್ರವರಿ (ಹಿ.ಸ.):

ಆ್ಯಂಕರ್:

ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ವರ್ತನೆ ತೀವ್ರ ಆಘಾತಕಾರಿ ಮತ್ತು ಖೇದಕರವಾಗಿದೆ. ಸ್ವಪಕ್ಷದವರೇ ಆ ನಡೆಯನ್ನು ಟೀಕಿಸಿದ್ದಾರೆ. ಇದಕ್ಕಾಗಿ ಕಾಂಗ್ರೆಸ್ ನಾಯಕರು ದೇಶದ ಕ್ಷಮೆ ಕೇಳಬೇಕು ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದರು.

ಬೆಂಗಳೂರಿನಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಕಾಂಗ್ರೆಸ್ ನ ಈ ನಡೆಗೆ ಅವರ ಪಕ್ಷದವರೇ ಅಸಮಾಧಾನ ಹೊರ ಹಾಕಿದ್ದಾರೆ ಎಂದು ಹೇಳಿದರು.

ಮಾರ್ಗರೇಟ್ ಆಳ್ವಾ ಅವರು 'ಡಿಸಿಪ್ಲೇನ್, ಡಿಗ್ನೆಟಿ ಮತ್ತು ಸೆನ್ಸ್ ' ಇರಬೇಕಿತ್ತು ಎಂದಿದ್ದಾರೆ. ಇನ್ನು ಅಖಿಲೇಶ್ ಯಾದವ್ ಸಹ ಇದನ್ನೇ ವಿಭಿನ್ನವಾಗಿ ಹೇಳಿದ್ದಾರೆ. ಕಾಂಗ್ರೆಸ್ಸಿಗರು ಇನ್ನಾದರೂ ಸೌಜನ್ಯದಿಂದ ನಡೆದುಕೊಳ್ಳಲಿ ಎಂದು ಜೋಶಿ ಕಿವಿಮಾತು ಹೇಳಿದರು.

ಎಐ ಶೃಂಗ ಸಭೆಯಲ್ಲಿ 29 ವಿವಿಧ ದೇಶಗಳ ಪ್ರಮುಖರು, 45 ಮಂತ್ರಿಗಳು, ದೇಶದ ಉದ್ಯಮ ಪ್ರಮುಖರು, ಎಐ ಪ್ರಮುಖರು ಇದ್ದರು. ಇದ್ಯಾವುದನ್ನೂ ಲೆಕ್ಕಿಸದ ರೀತಿ ಕಾಂಗ್ರೆಸ್ ತೀರಾ ತೀರಾ ಅನುಚಿತ ವರ್ತನೆ ತೋರಿದೆ ಎಂದು ಜೋಶಿ ಕಿಡಿ ಕಾರಿದ್ದು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ದೇಶದ ಜನತೆ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande