ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ: ಬೊಮ್ಮಾಯಿ
ಹಾವೇರಿ, 23 ಫೆಬ್ರವರಿ (ಹಿ.ಸ.): ಆ್ಯಂಕರ್: ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರ
ಶಾಸಕ ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿದೆ: ಬೊಮ್ಮಾಯಿ


ಹಾವೇರಿ, 23 ಫೆಬ್ರವರಿ (ಹಿ.ಸ.):

ಆ್ಯಂಕರ್:

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ಪಡ್ಯಂತ್ರ ನಡೆದಿದೆ. ಒತ್ತಾಯಪೂರ್ವಕವಾಗಿ ಅವರಿಗೆ ಹಣ ನೀಡುವ ಪ್ರಯತ್ನ ನಡೆದಿದೆ. ಭ್ರಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಒತ್ತಾಯಿಸುದಾಗಿ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಚಂದ್ರು ಲಮಾಣಿ ಅವರ ಆಸ್ಪತ್ರೆಯಲ್ಲಿ ಎಲ್ಲ ರೀತಿಯ ಜನರು ಬಂದಿರುತ್ತಾರೆ. ಹೀಗಾಗಿ ಅದರಲ್ಲಿ ಯಾವುದೂ ಸ್ಪಷ್ಟತೆ ಇಲ್ಲ. ಲೋಕಾಯುಕ್ತರು ಕೇಸ್ ಹಾಕಿದ್ದಾರೆ. ತನಿಖೆ ನಂತರ ಸತ್ಯಾ ಸತ್ಯತೆ ಹೊರ ಬರುತ್ತದೆ. ಒಬ್ಬ ಯುವ ವೈದ್ಯರು ಒಳ್ಳೆಯ ಕೆಲಸ ಮಾಡುತ್ತಿರುವಾಗ ಒಂದು ಕರಿ ನೆರಳು ಅವರ ಸೇವೆಗೆ ಅಡ್ಡಿಯಾಗಿದೆ. ಲಂಚ ಕೊಡುವ ಒತ್ತಾಯ ಮಾಡುವುದೂ ಕೂಡ ಭಷ್ಟಾಚಾರ ನಿಗ್ರಹ ಕಾಯ್ದೆಯ ಪ್ರಕಾರ ತಪ್ಪು ಹೀಗಾಗಿ ಎಲ್ಲ ಆಯಾಮಗಳಲ್ಲಿ ಸರಿಯಾದ ರೀತಿಯಲ್ಲಿ ತನಿಖೆಯಾಗಬೇಕೆಂದು ಒತ್ತಾಯ ಮಾಡುತ್ತೇನೆ. ಯಾವುದೇ ಒಬ್ಬರ ಸಾರ್ವಜನಿಕರ ಜೀವನವನ್ನು ಪಡ್ಯಂತ್ರದಿಂದ ಮುಗಿಸುವ ಕೆಲಸವನ್ನು ಯಾರೂ ಪೋತ್ಸಾಹ ಮಾಡಬಾರದು ಖಂಡಿಸಬೇಕು ಎಂದು ಹೇಳಿದರು.

ಗುತ್ತಿಗೆದಾರರ ಸಂಘದವರು ಮಾಡಿರುವ ಕಮಿಷನ್ ಆರೋಪದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ. ಅವರು, ಕಾಂಗ್ರೆಸ್ ನಾಟಕ ಬಟಾ ಬಯಾಗಿದೆ. ಗುತ್ತಿಗೆದಾರರ ಸಂಘ ಒಂದೇ ಅಲ್ಲ. ಬೆಸ್ಕಾಂ ಗುತ್ತಿಗೆದಾರರ ಸಂಘ, ಪಿಡಬ್ಲ್ಯುಡಿ ಸಂಘ, ಎಲ್ಲ ಗುತ್ತಿಗೆದಾರರ ಸಂಘದವರು ಪತ್ರಿಕಾ ಗೋಷ್ಠಿ ಮಾಡಿ ಕಮಿಷನ್ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಕಾಂಗ್ರೆಸ್‌ ನವರಿಗೆ ಈ ಬಗ್ಗೆ ಪ್ರಶ್ನೆ ಮಾಡುವ ನೈತಿಕತೆ ಇಲ್ಲ ಎಂದು ಹೇಳಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande