
ವಿಜಯಪುರ, 23 ಫೆಬ್ರವರಿ (ಹಿ.ಸ.)
ಆ್ಯಂಕರ್: ದ್ವಿತೀಯ ಪಿಯುಸಿ ಪರೀಕ್ಷೆ-1ರ ಪರೀಕ್ಷೆ ಜಿಲ್ಲೆಯ 64 ಪರೀಕ್ಷಾ ಕೇಂದ್ರಗಳಲ್ಲಿ ಫೆಬ್ರವರಿ 28 ರಿಂದ ಮಾರ್ಚ್ 17ರ ವರೆಗೆ ನಡೆಯಲಿವೆ.
ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ-2023ರ ಕಲಂ 163ರನ್ವಯ ನಿಷೇಧಾಜ್ಞೆ ಜಾರಿಗೊಳಿಸಿ, ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ಆನಂದ.ಕೆ ಅವರು ಆದೇಶ ಹೊರಡಿಸಿದ್ದಾರೆ.
ಈ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ಪ್ರದೇಶದಲ್ಲಿ ಬೆಳಿಗ್ಗೆ 8 ಗಂಟೆಯಿಂದ ಪರೀಕ್ಷೆ ಮುಕ್ತಾಯವಾಗುವವರೆಗೆ ನಿಷೇಧಿತ ಪ್ರದೇಶವೆಂದು ಘೋಷಿಸಿ, ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಕೇಂದ್ರಗಳು, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಲಾಗಿದೆ.
ಹಿಂದೂಸ್ತಾನ್ ಸಮಾಚಾರ್ / jyothi deshpande