ಟ್ಯಾಂಕರ್ ಮಾಫಿಯಾ ಜೊತೆ ಸರಕಾರ ಶಾಮೀಲು : ಆರ್. ಅಶೋಕ
ಬೆಂಗಳೂರು, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯ ಸರ್ಕಾರ ಟ್ಯಾಂಕರ್ ಮಾಫಿಯಾ ಜತೆ ಕೈಜೋಡಿಸಿದೆ ಎಂದು ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಗಂಭೀರ ಆರೋಪ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಟ್ಯಾಂಕರ್ ಮಾಫಿಯಾಗೆ ಅನುಕೂಲವಾಗಲು ಕೊಳವೆಬಾವಿಗಳ ದುರಸ್ತಿ ಕ
Ashok


ಬೆಂಗಳೂರು, 23 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯ ಸರ್ಕಾರ ಟ್ಯಾಂಕರ್ ಮಾಫಿಯಾ ಜತೆ ಕೈಜೋಡಿಸಿದೆ ಎಂದು ವಿಧಾನ ಸಭೆ ಪ್ರತಿಪಕ್ಷದ ನಾಯಕ ಆರ್.ಅಶೋಕ ಗಂಭೀರ ಆರೋಪ ಮಾಡಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಟ್ಯಾಂಕರ್ ಮಾಫಿಯಾಗೆ ಅನುಕೂಲವಾಗಲು ಕೊಳವೆಬಾವಿಗಳ ದುರಸ್ತಿ ಕಾರ್ಯದಲ್ಲಿ ಸರ್ಕಾರ ಉದ್ದೇಶಪೂರ್ವಕ ನಿರ್ಲಕ್ಷ್ಯ ತೋರಿಸುತ್ತಿದೆ ಎಂದು ದೂರಿದ್ದಾರೆ.

ಕೊಳವೆಬಾವಿಗಳನ್ನು ದುರಸ್ತಿ ಮಾಡದೆ ಜನರನ್ನು ನೀರಿನ ಸಂಕಷ್ಟಕ್ಕೆ ತಳ್ಳಲಾಗಿದೆ. ನೀರಿನ ಸಮಸ್ಯೆಯನ್ನು ಹೆಚ್ಚಿಸಿ, ಟ್ಯಾಂಕರ್ ವ್ಯವಹಾರಕ್ಕೆ ಲಾಭವಾಗುವಂತೆ ಮಾಡುವ ಮೂಲಕ ಸರ್ಕಾರ ಹಣ ಮಾಡುವ ಮಟ್ಟಕ್ಕೆ ಇಳಿದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕಳೆದ ಎರಡು ವರ್ಷಗಳಿಂದ ಕೊಳವೆಬಾವಿ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಇದರ ಹಿಂದೆ ಟ್ಯಾಂಕರ್ ಮಾಫಿಯಾದ ಪ್ರಭಾವವಿದೆಯೇ ಎಂಬ ಪ್ರಶ್ನೆ ಉದ್ಭವಿಸುತ್ತಿದೆ ಎಂದು ಅಶೋಕ ಆರೋಪಿಸಿದ್ದಾರೆ.

“ಬೆಂಗಳೂರಿನ ಶೇ.50ರಷ್ಟು ಜನರು ಕಾನೂನು ಪಾಲನೆ ಮಾಡುವುದಿಲ್ಲ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಹೇಳಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್. ಮೊದಲು ನಿಮ್ಮ ಪ್ರಾಮಾಣಿಕತೆಯನ್ನು ಆತ್ಮಪರಿಶೀಲನೆ ಮಾಡಿಕೊಳ್ಳಿ,” ಎಂದು ಟೀಕಿಸಿದ್ದಾರೆ.

ಕಳೆದ ಎರಡು ವರ್ಷಗಳಿಂದ ಕೊಳವೆಬಾವಿ ದುರಸ್ತಿ ಕಾರ್ಯ ಏಕೆ ನಡೆಯುತ್ತಿಲ್ಲ? ಟ್ಯಾಂಕರ್ ಮಾಫಿಯಾದಿಂದ ಎಷ್ಟು ಕಮಿಷನ್ ಪಡೆಯಲಾಗಿದೆ? ಈ ವ್ಯವಹಾರದಲ್ಲಿ ಕಾಂಗ್ರೆಸ್ ಹೈಕಮಾಂಡ್ ಪಾತ್ರವೇನು?” ಎಂದು ಅಶೋಕ ಪ್ರಶ್ನಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande