ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮವಲ್ಲ: ದೇಶದ ಕಾರ್ಯಕ್ರಮ;ಡಿ.ಕೆ.ಶಿವಕುಮಾರ್
ಚಿಕ್ಕಬಳ್ಳಾಪುರ, 23 ಫೆಬ್ರವರಿ (ಹಿ.ಸ.): ಆ್ಯಂಕರ್: ವಿಬಿ-ಜಿರಾಮ್-ಜಿ ಯೋಜನೆ ಅನುಷ್ಠಾನ ಖಂಡಿಸಿ ಹಾಗೂ ಮನರೇಗಾ ಯೋಜನೆ ಪುನರ್ ಸ್ಥಾಪನೆಗೆ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ ನರೇಗಾ ಬಚಾವ್‌ ಆಂದೋಲನ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು
Dks


ಚಿಕ್ಕಬಳ್ಳಾಪುರ, 23 ಫೆಬ್ರವರಿ (ಹಿ.ಸ.):

ಆ್ಯಂಕರ್:

ವಿಬಿ-ಜಿರಾಮ್-ಜಿ ಯೋಜನೆ ಅನುಷ್ಠಾನ ಖಂಡಿಸಿ ಹಾಗೂ ಮನರೇಗಾ ಯೋಜನೆ ಪುನರ್ ಸ್ಥಾಪನೆಗೆ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ ನರೇಗಾ ಬಚಾವ್‌ ಆಂದೋಲನ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮಾತನಾಡಿದರು.

ಈ ದೇಶವನ್ನು ಉಳಿಸುವುದಕ್ಕಾಗಿ ನರೇಗಾ ಬಚಾವೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಾನು ಯಾವಾಗಲೂ ಹೇಳುತ್ತೇನೆ, “ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಯಾವಾಗಲೂ ಎಲ್ಲ ವರ್ಗದ ಜನರಿಗೆ ನಾವು ಕಾರ್ಯಕ್ರಮ ಕೊಟ್ಟು, ಬದುಕಿನಲ್ಲಿ ಬದಲಾವಣೆ ತರುವಂತ ಕೆಲಸ ನಾವು ಮಾಡಿಕೊಂಡು ಬರುತ್ತಿದ್ದೇವೆ ಎಂದರು.

20 ವರ್ಷದ ಹಿಂದೆ ಬಡವರಿಗೆ ಉದ್ಯೋಗವನ್ನು ಕಲ್ಪಿಸುವ, ಅವರ ಕೈಗಳಿಗೆ ಕೆಲಸ ಕೊಡುವ ಮನರೇಗಾ ಇಡೀ ದೇಶದಲ್ಲೇ ಕ್ರಾಂತಿಕಾರಕ ಕಾರ್ಯಕ್ರಮವಾಗಿತ್ತು. ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ. ಇಡೀ ದೇಶದ ಕಾರ್ಯಕ್ರಮ. ದೇಶದ ಬಡ ಜನರ ಕಾರ್ಯಕ್ರಮ.

ಬಡವರಿಗೆ ಕೂಲಿ ಕೆಲಸಗಳನ್ನು ಕೊಟ್ಟು ಅವರಿಗೆ ಆತ್ಮಸ್ಥೈರ್ಯವನ್ನು ತುಂಬುವಂತ ಕಾರ್ಯಕ್ರಮ. ಮನರೇಗಾ ಯೋಜನೆಯನ್ನು ಉಳಿಸಿ, ಉದ್ಯೋಗ ಹಕ್ಕನ್ನು ಉಳಿಸಿ, ಗ್ರಾಮಗಳ ಸ್ವಯಂ ಆಡಳಿತದ ಹಕ್ಕನ್ನ ಮರು ಸ್ಥಾಪನೆ ಮಾಡುವ ಉದ್ದೇಶದಿಂದ ನಾವು ಇಂದು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande