ಮಾ. 02 ರಂದು ಮುಂದುವರೆದ ಕೆಡಿಪಿ ತ್ರೈಮಾಸಿಕ ಸಭೆ
ಚಿತ್ರದುರ್ಗ, 23 ಫೆಬ್ರವರಿ (ಹಿ.ಸ.): ಆ್ಯಂಕರ್: ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾ. 02 ಬೆಳಿಗ್ಗೆ 10.30ಕ್ಕೆ ಮುಂದುವರೆದ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿದೆ. ಕಳೆದ ಜ. 19 ರಂದು ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿತ್ತು. ಆ
ಮಾ. 02 ರಂದು ಮುಂದುವರೆದ ಕೆಡಿಪಿ ತ್ರೈಮಾಸಿಕ ಸಭೆ


ಚಿತ್ರದುರ್ಗ, 23 ಫೆಬ್ರವರಿ (ಹಿ.ಸ.):

ಆ್ಯಂಕರ್:

ಚಿತ್ರದುರ್ಗ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಮಾ. 02 ಬೆಳಿಗ್ಗೆ 10.30ಕ್ಕೆ ಮುಂದುವರೆದ ಕೆ.ಡಿ.ಪಿ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ಹಮ್ಮಿಕೊಳ್ಳಲಾಗಿದೆ.

ಕಳೆದ ಜ. 19 ರಂದು ತ್ರೈಮಾಸಿಕ ಕೆಡಿಪಿ ಸಭೆ ಆಯೋಜಿಸಲಾಗಿತ್ತು. ಆದರೆ ಅಂದು ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಅಪೂರ್ಣವಾಗಿದ್ದ ಕಾರಣದಿಂದ, ಪ್ರಗತಿ ಪರಿಶೀಲನಾ ಸಭೆ ಮುಂದುವರೆಸಲಾಗುವುದು ಎಂದು ಪ್ರಕಟಸಲಾಗಿತ್ತು. ಅದರಂತೆ ಜಿಲ್ಲೆಯಲ್ಲಿ ಮುಂದಿನ ಆರ್ಥಿಕ ಸಾಲಿನಲ್ಲಿ ನರೇಗಾ ಯೋಜನೆ ಅನುಷ್ಠಾನದ ಕುರಿತು ಹಾಗೂ ಮುಂದುವರೆದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ ಮಾ. 02 ರಂದು ಬೆ. 10.30 ಗಂಟೆಗೆ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಭೆ ನಡೆಯಲಿದೆ. ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಸಭೆಯ ಅಧ್ಯಕ್ಷತೆ ವಹಿಸುವರು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎಸ್.ಆಕಾಶ್ ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande