
ಮಂಡ್ಯ, 23 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಬಳಿ ರಾಜ್ಯ ಹೆದ್ದಾರಿಯಲ್ಲಿ ಬ್ರೇಕ್ ವಿಫಲವಾಗಿ ಕೆಎಸ್ಆರ್ಟಿಸಿ ಬಸ್ ರೈಲಿಂಗ್ಗೆ ಡಿಕ್ಕಿ ಹೊಡೆದಿದೆ. ಸುಮಾರು 60ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸುತ್ತಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.
ಡಿಕ್ಕಿಯ ಪರಿಣಾಮ ಬಸ್ನ ಮುಂಭಾಗ ಜಖಂಗೊಂಡಿದ್ದು, ಗಾಜುಗಳು ಒಡೆದಿವೆ. ಕೆಲವರಿಗೆ ಸಣ್ಣ ಗಾಯಗಳಾಗಿದ್ದು, ಸ್ಥಳಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.
ಘಟನೆ ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa