ಮುಕುಲ್ ರಾಯ್ ನಿಧನಕ್ಕೆ ಮಲ್ಲಿಕಾರ್ಜುನ ಖರ್ಗೆ ಸಂತಾಪ
ನವದೆಹಲಿ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, ಭಾರತೀಯ ಯುವ ಕಾಂಗ್ರೆಸ್ನೊಂದಿಗೆ ತಮ್ಮ
Kharge


ನವದೆಹಲಿ, 23 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮಾಜಿ ಕೇಂದ್ರ ಸಚಿವ ಮುಕುಲ್ ರಾಯ್ ಅವರ ನಿಧನದಿಂದ ತೀವ್ರ ದುಃಖವಾಗಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.

ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂತಾಪ ಸಂದೇಶ ಹಂಚಿಕೊಂಡಿರುವ ಅವರು, ಭಾರತೀಯ ಯುವ ಕಾಂಗ್ರೆಸ್ನೊಂದಿಗೆ ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದ ಮುಕುಲ್ ರಾಯ್, ಪಶ್ಚಿಮ ಬಂಗಾಳದ ಜನರ ಪರ ಪ್ರಾಮಾಣಿಕವಾಗಿ ಕೆಲಸ ಮಾಡಿದರು ಎಂದು ಖರ್ಗೆ ಸ್ಮರಿಸಿದ್ದಾರೆ.

ಅವರ ಸಂಘಟನಾ ಕೌಶಲ್ಯ ಮತ್ತು ಜನಸಾಮಾನ್ಯರ ರಾಜಕೀಯದ ಆಳವಾದ ಅರಿವು ಪಕ್ಷಾತೀತವಾಗಿ ಗೌರವಕ್ಕೆ ಪಾತ್ರವಾಗಿತ್ತು ಎಂದು ತಿಳಿಸಿದ್ದಾರೆ.

ಮುಕುಲ್ ರಾಯ್ ಅವರ ಕುಟುಂಬದವರು, ಬೆಂಬಲಿಗರು ಹಾಗೂ ಅವರನ್ನು ಕಳೆದುಕೊಂಡ ಎಲ್ಲ ದುಃಖಿತರಿಗೆ ಖರ್ಗೆ ಸಂತಾಪ ಸೂಚಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande