ವಿದ್ಯಾರ್ಥಿ ನಿಲಯಗಳಲ್ಲಿ ಅನಧಿಕೃತ ವ್ಯಕ್ತಿಗಳ ಪ್ರವೇಶ ನಿರ್ಬಂಧ
ಗದಗ, 23 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಎಲ್ಲ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂದಿಸಿದೆ. ಸರ್ಕಾರಿ ಅಧಿಕಾರಿಗಳು ಹಾಗೂ ಸರ್ಕಾರದ ಚುನಾಯಿತ ಜನಪ್ರತಿನಿಧಿಗಳನ್ನು ಹೊರತುಪಡಿಸಿ, ಇತರೆ ವ್ಯಕ್ತಿಗಳು ಜಿಲ್ಲಾ ಮಟ್ಟದ ಉಪನಿರ್ದೇಶಕರ ಅಥವಾ ಸಂಬಂ
ಫೋಟೋ


ಗದಗ, 23 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ ಎಲ್ಲ ಅನಧಿಕೃತ ವ್ಯಕ್ತಿಗಳ ಪ್ರವೇಶವನ್ನು ನಿರ್ಬಂದಿಸಿದೆ.

ಸರ್ಕಾರಿ ಅಧಿಕಾರಿಗಳು ಹಾಗೂ ಸರ್ಕಾರದ ಚುನಾಯಿತ ಜನಪ್ರತಿನಿಧಿಗಳನ್ನು ಹೊರತುಪಡಿಸಿ, ಇತರೆ ವ್ಯಕ್ತಿಗಳು ಜಿಲ್ಲಾ ಮಟ್ಟದ ಉಪನಿರ್ದೇಶಕರ ಅಥವಾ ಸಂಬಂಧಪಟ್ಟ ತಾಲೂಕಿನ ಸಹಾಯಕರ ನಿರ್ದೇಶಕರ ಲಿಖಿತ ಅನುಮತಿಯೊಂದಿಗೆ ಸೀಮಿತ ಅವಧಿಗೆ ಮಾತ್ರ ನಿಲಯಕ್ಕೆ ಪ್ರವೇಶ ಮಾಡಬಹುದಾಗಿದೆ.

ವಿದ್ಯಾರ್ಥಿ ನಿಲಯ ಭೇಟಿ ನೀಡಲು ಅನುಮತಿ ಪಡೆದ ವ್ಯಕ್ತಿಯು ಒಂದು ವೇಳೆ ಬಾಲಕಿಯರ ವಿದ್ಯಾರ್ಥಿ ನಿಲಯಕ್ಕೆ ಭೇಟಿ ನೀಡಬೇಕಾದಲ್ಲಿ ಕಡ್ಡಾಯವಾಗಿ ಮಹಿಳಾ ಅಧಿಕಾರಿಗಳೊಂದಿಗೆ ಮಾತ್ರ ಭೇಟಿ ನೀಡತಕ್ಕದ್ದು.

ಒಂದು ವೇಳೆ ವಸತಿ ನಿಲಯಗಳ ಬಗ್ಗೆ ದೂರುಗಳು ಬಂದಲ್ಲಿ ಅಥವಾ ನಿಲಯದ ಉತ್ತಮ ಕಾರ್ಯ ಚಟುವಟಿಕೆಗಳ ಬಗ್ಗೆ ಪರಿಶೀಲಿಸಲು ಸಮುದಾಯದ ಮುಖಂಡರಾಗಲೀ ಅಥವಾ ಮಾಧ್ಯಮ ಪ್ರತಿನಿಧಿಗಳಾಗಲಿ ನಿಲಯಕ್ಕೆ ಭೇಟಿ ನೀಡಲು ಬಯಸಿದ್ದಲ್ಲಿ ಕಡ್ಡಾಯವಾಗಿ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಯ ಅಥವಾ ಸಂಬಂಧಪಟ್ಟ ತಾಲೂಕಿನ ಸಹಾಯಕ ನಿರ್ದೇಶಕರ ಲಿಖಿತ ಅನುಮತಿಯೊಂದಿಗೆ ಹಾಗೂ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿ ಅಥವಾ ಸಿಬ್ಬಂದಿ ಯೊಂದಿಗೆ ಮಾತ್ರ ನಿಲಯಕ್ಕೆ ಸೀಮಿತ ಅವಧಿಗೆ ಪ್ರವೇಶ ಪಡೆಯಬಹುದಾಗಿದೆ.

ಇದನ್ನು ಹೊರತುಪಡಿಸಿ ಯಾವುದೇ ಅನ್ಯ ವ್ಯಕ್ತಿ ಪ್ರವೇಶ ಮಾಡಿದಲ್ಲಿ ಅಂತಹ ಪ್ರವೇಶವನ್ನು ಅತಿಕ್ರಮ ಪ್ರವೇಶ ಎಂದು ಪರಿಗಣಿಸಿ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ಡಾ. ನಂದಾ ಹಣಬರಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande