ಮಾರ್ಚ್ 1 ರಂದು ಜಲ ಮನೋರಜಂನ ಉದ್ಯಾನವನ ಉದ್ಘಾಟನೆ
ವಿಜಯಪುರ, 23 ಫೆಬ್ರವರಿ (ಹಿ.ಸ.) ಆ್ಯಂಕರ್: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಇವರ ಸಹಯೋಗದಲ್ಲಿ ಜಲ ಮನೋರಂಜನ ಉದ್ಯಾನವನ ಉದ್ಘಾಟನಾ ಸಮಾರಂಭ ಮಾರ್ಚ್ 1ರಂದು ಬೆಳಿಗ್ಗೆ 11 ಗಂಟೆಗೆ ಆಲಮಟ್ಟಿಯಲ್ಲಿ ಆಯೋಜಿಸಲಾಗಿದೆ. ಉಪ ಮುಖ್ಯ ಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳ
ಮಾರ್ಚ್ 1 ರಂದು ಜಲ ಮನೋರಜಂನ ಉದ್ಯಾನವನ ಉದ್ಘಾಟನೆ


ವಿಜಯಪುರ, 23 ಫೆಬ್ರವರಿ (ಹಿ.ಸ.)

ಆ್ಯಂಕರ್: ಜಲ ಸಂಪನ್ಮೂಲ ಇಲಾಖೆ ಹಾಗೂ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಇವರ ಸಹಯೋಗದಲ್ಲಿ ಜಲ ಮನೋರಂಜನ ಉದ್ಯಾನವನ ಉದ್ಘಾಟನಾ ಸಮಾರಂಭ ಮಾರ್ಚ್ 1ರಂದು ಬೆಳಿಗ್ಗೆ 11 ಗಂಟೆಗೆ ಆಲಮಟ್ಟಿಯಲ್ಲಿ ಆಯೋಜಿಸಲಾಗಿದೆ.

ಉಪ ಮುಖ್ಯ ಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಮತ್ತು ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ ಅವರು ಸಮಾರಂಭದ ಘನ ಉಪಸ್ಥಿತಿ ವಹಿಸಲ್ಲಿದ್ದಾರೆ. ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರಾದ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಉದ್ಘಾಟಿಸುವರು. ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರು ಘನ ಅಧ್ಯಕ್ಷತೆ ವಹಿಸಲಿದ್ದಾರೆ.

ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ–2 ಹಾಗೂ ಶಾಸಕರಾದ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿರ್ಜೆಂಟ್ ನಿಯಮಿತದ ಅಧ್ಯಕ್ಷರೂ ಆದ ಶಾಸಕ ಅಪ್ಪಾಜಿ ಸಿ.ಎಸ್. ನಾಡಗೌಡ, ಸಂಸದರಾದ ರಮೇಶ ಜಗಜಿಣಗಿ ಹಾಗೂ ಸುಧಾ ಮೂರ್ತಿ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಮತಿ ಕಾಂತಾ ನಾಯಕ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ, ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಬಿ.ಎಸ್.ಕವಲಗಿ, ಶಾಸಕರುಗಳಾದ ಹಣಮಂತ ನಿರಾಣಿ, ಸುನೀಲಗೌಡ ಪಾಟೀಲ, ಪಿ.ಎಚ್. ಪೂಜಾರ, ಕೇಶವ ಪ್ರಸಾದ ಎಸ್, ನಿಡಗುಂದಿ ತಾಲೂಕಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಚಂದ್ರಶೇಖರ ಶಂಕರೆಪ್ಪ ಹಳೇಮನಿ ಅವರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande