ನವೀಕರಣಗೊಂಡ ಶಿಶು ಪಾಲನಾ ಕೇಂದ್ರ ಉದ್ಘಾಟನೆ
ಧಾರವಾಡ, 23 ಫೆಬ್ರವರಿ (ಹಿ.ಸ.): ಆ್ಯಂಕರ್: ಧಾರವಾಡ ಜಿಲ್ಲಾ ಪಂಚಾಯತ್‌ ಆವರಣದಲ್ಲಿರುವ ನವೀಕರಣಗೊಂಡ ಶಿಶುಪಾಲನಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ವಿಧಾನ ಪರಿಷತ್‌ ಸದಸ್ಯರಾದ ಎಫ್.ಹೆಚ್.ಜಕ್ಕಪ್ಪನವರ, ಶಾಸಕ ಎಂ. ಆರ್. ಪಾಟೀಲ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾ
Inauguration


ಧಾರವಾಡ, 23 ಫೆಬ್ರವರಿ (ಹಿ.ಸ.):

ಆ್ಯಂಕರ್:

ಧಾರವಾಡ ಜಿಲ್ಲಾ ಪಂಚಾಯತ್‌ ಆವರಣದಲ್ಲಿರುವ ನವೀಕರಣಗೊಂಡ ಶಿಶುಪಾಲನಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್, ವಿಧಾನ ಪರಿಷತ್‌ ಸದಸ್ಯರಾದ ಎಫ್.ಹೆಚ್.ಜಕ್ಕಪ್ಪನವರ, ಶಾಸಕ ಎಂ. ಆರ್. ಪಾಟೀಲ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್ ಮಕ್ಕಳನ್ನು ಅತ್ಯಂತ ಕಾಳಜಿಯಿಂದ ನೋಡಿಕೊಳ್ಳಿ. ಆರೋಗ್ಯ, ಪೌಷ್ಟಿಕ ಆಹಾರ, ಸ್ವಚ್ಛತೆ ಹಾಗೂ ಸುರಕ್ಷತೆಗೆ ವಿಶೇಷ ಗಮನ ನೀಡಬೇಕು. ಮಕ್ಕಳೊಂದಿಗೆ ಪ್ರೀತಿಯಿಂದ ಮತ್ತು ಸಹನೆಯಿಂದ ವರ್ತಿಸಿ, ಅವರಿಗೆ ಭದ್ರತೆ ಮತ್ತು ಸ್ನೇಹಪರ ವಾತಾವರಣವನ್ನು ಒದಗಿಸಬೇಕು ಎಂದು ಹೇಳಿದರು.

ಮಕ್ಕಳು ಸಚಿವರಿಗೆ, ಶಾಸಕರಿಗೆ ಹಾಗೂ ಎಲ್ಲಾ ಅಧಿಕಾರಿಗಳಿಗೆ ಗುಲಾಬಿ ಹೂವುಗಳನ್ನು ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಪುಟ್ಟ ಮಕ್ಕಳ ಮುದ್ದಾದ ಸ್ವಾಗತ ಎಲ್ಲರ ಗಮನ ಸೆಳೆಯಿತು. ಅವರ ನಗುಮುಖ ಮತ್ತು ಸಂಭ್ರಮ ವಿಶೇಷ ಮೆರುಗು ನೀಡಿತು ಮತ್ತು ಮಕ್ಕಳ ಈ ಪ್ರೀತಿಪೂರ್ವಕ ಸ್ವಾಗತಕ್ಕೆ ಸಚಿವರು, ಶಾಸಕರು ಹಾಗೂ ಅಧಿಕಾರಿಗಳು ಮೆಚ್ಚುಗೆ ವ್ಯಕ್ತಪಡಿಸಿದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande