
ಬೆಂಗಳೂರು, 23 ಫೆಬ್ರವರಿ (ಹಿ.ಸ.):
ಆ್ಯಂಕರ್:
ರಾಜ್ಯ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಭಿನ್ನಮತ ಭುಗಿಲೆದ್ದಿದೆ. ಮುಖ್ಯಮಂತ್ರಿ ಹುದ್ದೆ ಕಾಳಗದಲ್ಲಿ ರಾಜ್ಯದ ಹಿತವನ್ನು ಸಂಪೂರ್ಣ ಕಡೆಗಣಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಆ ಪಕ್ಷದವರಿಗೇ ಬಿಟ್ಟ ವಿಚಾರ. ಆದರೆ, ಮುಖ್ಯಮಂತ್ರಿ ಪಟ್ಟದ ಕಾಳಗದಿಂದ ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿರುವುದಂತೂ ಸ್ಪಷ್ಟ. ಅವೈಜ್ಞಾನಿಕ ಗ್ಯಾರೆಂಟಿ ಯೋಜನೆಗಳು, ಎಲ್ಲೇ ಮೀರಿದ ಭ್ರಷ್ಟಾಚಾರ, ಆಂತರಿಕ ಭಿನ್ನಮತದ ಕಾರಣ ರಾಜ್ಯದ ಸ್ಥಿತಿ ಅಧೋಗತಿ ತಲುಪಿದೆ ಎಂದು ದೂರಿದಾರೆ.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa