
ಧಾರವಾಡ, 23 ಫೆಬ್ರವರಿ (ಹಿ.ಸ.):
ಆ್ಯಂಕರ್:
ಸರ್ಕಾರದಿಂದ ಇಲಾಖೆಗಳಿಗೆ ಬಿಡುಗಡೆಯಾಗಿರುವ ಅನುದಾನವನ್ನು ಹಿಂತಿರುಗದಂತೆ ಬಳಸಬೇಕು. ಗುಣಮಟ್ಟದ ಕಾಮಗಾರಿಗಳನ್ನು ಮಾಡಬೇಕು. ಸಾರ್ವಜನಿಕರಿಗೆ ಬೇಸಿಗೆ ದಿನಗಳಲ್ಲಿ ಯಾವುದೇ ರೀತಿ ಅನಾನುಕೂಲವಾಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಹೇಳಿದರು.
ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ೨೦೨೫-೨೬ ನೇ ಸಾಲಿನ ಡಿಸೆಂಬರ್ ೨೦೨೫ ರ ಅಂತ್ಯಕ್ಕೆ ಕೊನೆಗೊಂಡಂತೆ ಮೂರನೇ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದರು.
ಪ್ರತಿ ಗ್ರಾಮ ಹಾಗೂ ನಗರ ಪ್ರದೇಶಗಳಲ್ಲಿನ ನೀರಿನ ಘಟಕಗಳಲ್ಲಿ ನಿಯಮಿತವಾಗಿ ನೀರಿನ ಗುಣಮಟ್ಟ ಪರೀಕ್ಷೆ ನಡೆಸಬೇಕು. ಒಂದು ವೇಳೆ ಯಾವುದೇ ರೀತಿಯ ಲೋಪದೋಷಗಳು ಅಥವಾ ಆರೋಗ್ಯಕ್ಕೆ ಹಾನಿಕಾರಕ ಅಂಶಗಳು ಕಂಡುಬಂದಲ್ಲಿ ಸಂಬಂಧಿತ ಅಧಿಕಾರಿಗಳೇ ನೇರ ಹೊಣೆಗಾರರಾಗಿರುತ್ತಾರೆ ಎಂದು ಅವರು ಹೇಳಿದರು.
ಕೃಷಿ ವಿಶ್ವವಿದ್ಯಾಲಯದವರು ಕಾಲಕ್ಕೆ ತಕ್ಕಂತೆ ಹೊಸ ಹೊಸ ಬೆಳೆ ತಳಿಗಳನ್ನು ಅಭಿವೃದ್ಧಿಪಡಿಸುವುದರ ಜೊತೆಗೆ ಅವುಗಳ ಕುರಿತು ರೈತರಿಗೆ ಸಮಗ್ರ ಮಾಹಿತಿ ನೀಡಬೇಕು ಮತ್ತು ಪ್ರಸ್ತುತ ಮಾವಿನ ಗಿಡಗಳು ಹೂವು ಹಿಡಿದಿವೆ. ಅವುಗಳಿಗೆ ಜಿಗಿ ಆಗಿ ಮಾವಿನ ಕಾಯಿ ಹೂವುಗಳು ಉದುರುತ್ತಿವೆ. ಅವುಗಳ ಬಗ್ಗೆ ವಿಶ್ವವಿದ್ಯಾಲಯ, ತೋಟಗಾರಿಕೆ ಇಲಾಖೆಯವರು ರೈತರಿಗೆ ಯಾವ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದನ್ನು ತಿಳಿಸಿ ಎಂದು ಹೇಳಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa