ಪ್ರಶಸ್ತಿಗಳಿಗಾಗಿ ಸಾರ್ವಜನಿಕರಿಂದ ಅರ್ಜಿ ಆಹ್ವಾನ
ಧಾರವಾಡ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಏಪ್ರೀಲ್ 05, 2026 ರ ಡಾ||ಬಾಬು ಜಗಜೀವನ್ ರಾಂ ರವರ 119 ನೇ ಜನ್ಮ ದಿನಾಚರಣೆ ಹಾಗೂ ಏಪ್ರೀಲ್ 14, 2026 ರ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲ
ಪ್ರಶಸ್ತಿಗಳಿಗಾಗಿ ಸಾರ್ವಜನಿಕರಿಂದ ಅರ್ಜಿ ಆಹ್ವಾನ


ಧಾರವಾಡ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಏಪ್ರೀಲ್ 05, 2026 ರ ಡಾ||ಬಾಬು ಜಗಜೀವನ್ ರಾಂ ರವರ 119 ನೇ ಜನ್ಮ ದಿನಾಚರಣೆ ಹಾಗೂ ಏಪ್ರೀಲ್ 14, 2026 ರ ಸಂವಿಧಾನ ಶಿಲ್ಪಿ ಭಾರತ ರತ್ನ ಡಾ||ಬಿ.ಆರ್.ಅಂಬೇಡ್ಕರ್ ರವರ 135 ನೇ ಜನ್ಮ ದಿನಾಚರಣೆಯನ್ನು ಸರ್ಕಾರದ ವತಿಯಿಂದ ಆಚರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ಜನಾಂಗದವರ ಶ್ರೇಯಸ್ಸಿಗಾಗಿ ಪ್ರೋತ್ಸಾಹಿಸಿ, ಶ್ರಮಿಸಿ, ಗಣನೀಯ ಸೇವೆ ಸಲ್ಲಿಸಿದ ಅರ್ಹ ವ್ಯಕ್ತಿಗಳನ್ನು ಗುರ್ತಿಸಿ 2026-27ನೇ ಸಾಲಿನ ಡಾ||ಬಾಬು ಜಗಜೀವನ್ ರಾಂ ಅವರ ಹಾಗೂ ಡಾ||ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಗಳನ್ನು ನೀಡುವ ಕುರಿತು ಜಿಲ್ಲಾ ಹಾಗೂ ತಾಲ್ಲೂಕು ಹಂತದಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಸಹಾಯಕ ನಿರ್ದೇಶಕರ ಸಮಾಜ ಕಲ್ಯಾಣ ಇಲಾಖೆ ಧಾರವಾಡ, ಹುಬ್ಬಳ್ಳಿ, ಕಲಘಟಗಿ, ಕುಂದಗೋಳ ಹಾಗೂ ನವಲಗುಂದದಲ್ಲಿ ಅರ್ಜಿ ನಮೂನೆಗಳನ್ನು ಪಡೆದು, ಅಗತ್ಯ ದಾಖಲಾತಿಗಳನ್ನು ಲಗತ್ತಿಸಿ ಮಾರ್ಚ 10, 2026 ರೊಳಗಾಗಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ ಹಾಗೂ ಸಂಬಂಧಿಸಿದ ಆಯಾ ತಾಲ್ಲೂಕಿನ ಸಹಾಯಕ ನಿರ್ದೇಶಕರ, ಸಮಾಜ ಕಲ್ಯಾಣ ಇಲಾಖೆಗೆ ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande