ಬಿಸಿಎಂ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಕೊಪ್ಪಳ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರು
ಬಿಸಿಎಂ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಕೊಪ್ಪಳ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ರ ಅಲೆಮಾರಿ/ಅಲೆಮಾರಿ ವಿದ್ಯಾರ್ಥಿಗಳಿಂದ 2025-26 ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಪೋಷಕರು, ವಿದ್ಯಾರ್ಥಿಗಳು ಮತ್ತು ಶೈಕ್ಷಣಿಕ ಸಂಸ್ಥೆಗಳ ಮನವಿಯ ಮೇರೆಗೆ ಮಾರ್ಚ್ 5 ರವರೆಗೆ ವಿಸ್ತರಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಈ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಲು ಸೂಚಿಸಿದೆ.

B.Arch,M.C.A.M.Ch(Medical), M.D, M.S(Master of Surgery), MS, M.Sc (Allied Sciences), MPT (Physiotherapy), MHA, MASTER OF PUBLIC HEALTH, MPH(Allied Sciences), M.Sc. Nursing, M.Sc, M.Tech, MBA, MBA FINTECH, MBA (LOGISTICS MANAGEMENT), MBBS, MS AYURVEDA, MD (Ayurveda), MD (Hom), MDS, PG DIPLOMA IN DENTAL, Pharm.D(Post Baccalaureate), M.Pharm, B.E, B.Tech, B.Sc. (Hons), B.V.Sc.&A.H. BAMS (Ayurveda), BHMS (Homeopathy), BNYS (Yoga and Naturopathy), BUMS (Unani), BAMS, BDS, M.Arch, B.F.Sc, B.Pharm, Pharm. D, B.Sc (Allied Sciences), BPT (Physiotherapy). BACHELOR OF OCCUPATIONAL THERAPY, B.Des, B.Sc. (Nursing), B.Sc.(Post Basic), B.Ed, B.Plan, DM (Medical), M.Phil, B TECH COMPUTER SCIENCE AND ENGINEERING (FULL STACK DEVELOPMENT), B TECH ELECTRICAL AND ELECTRONICS ENGINEERING (ELECTRIC VEHICLE TECHNOLOGY), Paramedical and all diploma courses ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.

https://ssp.postmatric.karnataka.gov.in ಮೂಲಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬAಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗಾಗಿ ವೆಬ್ಸೈಟ್ ವಿಳಾಸ https://bcwd.karnataka.gov.in ಗೆ ಭೇಟಿ ನೀಡಬೇಕು. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ, ದೂರವಾಣಿ ಸಂಖ್ಯೆ: 8050770004, ಇ-ಮೇಲ್: bcwdhelpline@gmail.com ರಾಜ್ಯ ವಿದ್ಯಾರ್ಥಿ ವೇತನ ತಂತ್ರಾAಶದ ಸಹಾಯವಾಣಿ ಇ-ಮೇಲ್: postmatrichelp@karnataka.gov.in ದೂರವಾಣಿ ಸಂಖ್ಯೆ: 1902 ಗೆ ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande