ಲಕ್ಷ್ಮೇಶ್ವರ ಪಟ್ಟಣದಲ್ಲಿ ಸಭೆ ನಡೆಸಿದ ಬಿಜೆಪಿ ಮುಖಂಡರು
ಗದಗ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ನಡೆದ ಲೋಕಾಯುಕ್ತ ಟ್ರ್ಯಾಪ್ ಪ್ರಕರಣವನ್ನು ಕಾಂಗ್ರೆಸ್ ಪಕ್ಷದ ಷಡ್ಯಂತ್ರ ಎಂದು ಆರೋಪಿಸಿ, ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಲೋಕಾಯುಕ್ತ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ಕೈಗೊಂಬೆಯಾಗಿ ಲೋಕಾಯುಕ್
ಫೋಟೋ


ಗದಗ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರ ವಿರುದ್ಧ ನಡೆದ ಲೋಕಾಯುಕ್ತ ಟ್ರ್ಯಾಪ್ ಪ್ರಕರಣವನ್ನು ಕಾಂಗ್ರೆಸ್ ಪಕ್ಷದ ಷಡ್ಯಂತ್ರ ಎಂದು ಆರೋಪಿಸಿ, ಬಿಜೆಪಿ ಹೋರಾಟಕ್ಕೆ ಸಜ್ಜಾಗಿದೆ. ಲೋಕಾಯುಕ್ತ ದಾಳಿ ರಾಜಕೀಯ ಪ್ರೇರಿತವಾಗಿದ್ದು, ಕಾಂಗ್ರೆಸ್ ಕೈಗೊಂಬೆಯಾಗಿ ಲೋಕಾಯುಕ್ತರು ಕಾರ್ಯನಿರ್ವಹಿಸಿದ್ದಾರೆ ಎಂದು ಬಿಜೆಪಿ ಮುಖಂಡರು ಗಂಭೀರ ಆರೋಪ ಮಾಡಿದ್ದಾರೆ.

ಗದಗ ಜಿಲ್ಲೆಯ ಲಕ್ಷ್ಮೇಶ್ವರನಲ್ಲಿ ನಾಳೆ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸಲು ತೀರ್ಮಾನ ಕೈಗೊಳ್ಳಲಾಗಿದೆ. ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಎರಡು ಮಂಡಲಗಳ ಕಾರ್ಯಕರ್ತರು ಸೇರಿ ಸಾವಿರಾರು ಕಾರ್ಯಕರ್ತರನ್ನು ಒಗ್ಗೂಡಿಸಿ ಹೋರಾಟ ನಡೆಸುವ ಯೋಜನೆ ರೂಪಿಸಲಾಗಿದೆ.

ಲಕ್ಷ್ಮೇಶ್ವರ–ಮುಂಡರಗಿ–ಶಿರಹಟ್ಟಿ ವ್ಯಾಪ್ತಿಯಲ್ಲಿ ನಡೆದ ಪೂರ್ವಭಾವಿ ಸಭೆಗಳಲ್ಲಿ ಪ್ರತಿಭಟನೆಗೆ ಅಂತಿಮ ರೂಪ ನೀಡಲಾಗಿದೆ.

ಕಾಂಗ್ರೆಸ್ ಪಕ್ಷದ ಗುತ್ತಿಗೆದಾರ ವಿಜಯರಾಜ್ ಪೂಜಾರನ್ನು ಬಳಸಿಕೊಂಡು ಟ್ರ್ಯಾಪ್ ಮಾಡಿಸಲಾಗಿದೆ ಎಂಬ ಆರೋಪವನ್ನು ಬಿಜೆಪಿ ಮುಖಂಡರು ಮುಂದಿಟ್ಟಿದ್ದಾರೆ.

ಈ ಪ್ರಕರಣದ ಹಿಂದೆ ಕಾಂಗ್ರೆಸ್ ಪಕ್ಷದ ನೇರ ಕೈವಾಡವಿದ್ದು, ಶಾಸಕರನ್ನು ರಾಜಕೀಯವಾಗಿ ಮುಗಿಸಲು ಸಂಚು ರೂಪಿಸಲಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ವಿರುದ್ಧ ಹೋರಾಟಕ್ಕೆ ಬಿಜೆಪಿ ಕಾರ್ಯಕರ್ತರು ಸಜ್ಜಾಗಿದ್ದು, ಲಕ್ಷ್ಮೇಶ್ವರದಲ್ಲಿ ಭರ್ಜರಿ ಪ್ರತಿಭಟನೆ ನಡೆಸಲು ಸಕಲ ಸಿದ್ಧತೆ ಕೈಗೊಳ್ಳಲಾಗಿದೆ.

ನಾಳೆಯ ಪ್ರತಿಭಟನೆಯಲ್ಲಿ ಸಾವಿರಾರು ಬಿಜೆಪಿ ಕಾರ್ಯಕರ್ತರು ಪಾಲ್ಗೊಳ್ಳಲಿದ್ದು, ಜಿಲ್ಲೆ ರಾಜಕೀಯ ವಲಯದಲ್ಲಿ ಈ ಬೆಳವಣಿಗೆಗಳು ತೀವ್ರ ಚರ್ಚೆಗೆ ಕಾರಣವಾಗಿವೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande