ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ
ವಿಜಯಪುರ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : 2025-26ನೇ ಸಾಲಿನ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಪ್ರವಾಸೋದ್ಯಮ ಇಲಾಖೆ ಒಂದು ತಿಂಗಳ ಕೌಶಲಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ. ಯೋಜನೆಯಡಿ ಪರಿಶಿಷ್ಟ ಜ
ಕೌಶಲ್ಯ ತರಬೇತಿಗೆ ಅರ್ಜಿ ಆಹ್ವಾನ


ವಿಜಯಪುರ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : 2025-26ನೇ ಸಾಲಿನ ಎಸ್.ಸಿ.ಎಸ್.ಪಿ-ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಪ್ರವಾಸೋದ್ಯಮ ಇಲಾಖೆ ಒಂದು ತಿಂಗಳ ಕೌಶಲಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಯೋಜನೆಯಡಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ನೀಡಲು ಹಾಗೂ ತರಬೇತಿ ಪಡೆದ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ ನಡೆಸಲು ಸಹಾಯಧನ ನೀಡಲು ಉದ್ದೇಶಿಸಲಾಗಿದೆ.

ಈ ತರಬೇತಿ ಹಾಗೂ ಸಹಾಯಧನಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ 181 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 124 ಅಭ್ಯರ್ಥಿಗಳ ಗುರಿಯನ್ನು ಪ್ರಸ್ತುತ ಸಾಲಿನಲ್ಲಿ ನಿಗದಿಪಡಿಸಿದೆ. ಈ ತರಬೇತಿಯನ್ನು ವಸತಿ ಸಹಿತ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳ ಮೂಲಕ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಈ ಕಾರ್ಯಕ್ರಮ ಅನುಷ್ಠಾನಗೊಳಿಸಲು ಜಿಲ್ಲೆಗೆ ಪರಿಶಿಷ್ಟ ಜಾತಿಗೆ-07 ಮತ್ತು ಪರಿಶಿಷ್ಟ ಪಂಗಡ-05 ಗುರಿ ನಿಗದಿ ಮಾಡಿ, ಮಾರ್ಗಸೂಚಿ ನಿಗದಿಪಡಿಸಲಾಗಿದೆ.

ಅರ್ಜಿದಾರರಿಗೆ ಅರ್ಹತೆಗಳು ಅರ್ಜಿದಾರರು ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರಿದವರಾಗಿರಬೇಕು. 20 ರಿಂದ 55 ವರ್ಷದೊಳಗಿರಬೇಕು. 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಲಘು ವಾಹನ ಚಾಲನಾ ಪರವಾನಿಗೆ ಪಡೆದಿರಬೇಕು. ನಗರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ 2 ಲಕ್ಷ ರೂ. ಮೀರಿರಬಾರದು. ಗ್ರಾಮಾಂತರ ಪ್ರದೇಶದ ಫಲಾನುಭವಿಗಳ ವಾರ್ಷಿಕ ಆದಾಯ 1.50 ಲಕ್ಷ ರೂ. ಮೀರಬಾರದು.

ವಿಜಯಪುರ ಜಿಲ್ಲೆ ನಿವಾಸಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅರ್ಜಿದಾರನು ಸರ್ಕಾರಿ ಇಲಾಖೆ ಅಥವಾ ನಿಗಮ ಮಂಡಳಿಗಳಲ್ಲಿ ಖಾಯಂ ನೌಕರಿಯಲ್ಲಿರಬಾರದು.

ಆಸಕ್ತರು15 ದಿನಗಳ ಒಳಗಾಗಿ ನಿಗದಿಪಡಿಸಿದ ಅರ್ಜಿ ನಮೂನೆ ಭರ್ತಿಮಾಡಿ ಇತ್ತೀಚಿನ ಭಾವಚಿತ್ರದೊಂದಿಗೆ ದ್ವಿ-ಪ್ರತಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಪ್ರವಾಸಿ ಪ್ರಾಜಾ, ಬ್ಲಾಕ್-1, ಇಂಡಿ ರಸ್ತೆ, ವಿಜಯಪುರ, ದೂರವಾಣಿ ಸಂಖ್ಯೆ: 08352-250359 ಸಂಪರ್ಕಿಸಬಹುದಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / jyothi deshpande


 rajesh pande