ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತ ಕೌಶಲ್ಯ ತರಬೇತಿ ಕಾರ್ಯಾಗಾರ
ಕೊಪ್ಪಳ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರು
ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತ ಕೌಶಲ್ಯ ತರಬೇತಿ ಕಾರ್ಯಾಗಾರ


ಕೊಪ್ಪಳ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಮತ್ತು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಕೊಪ್ಪಳ ಇವರುಗಳ ಸಂಯುಕ್ತಾಶ್ರಯದಲ್ಲಿ ಯುವನಿಧಿ ಯೋಜನೆಯಡಿಯಲ್ಲಿ ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಪದವಿ ಹಾಗೂ ಡಿಪ್ಲೊಮಾ ಅಭ್ಯರ್ಥಿಗಳಿಗೆ ಯುವನಿಧಿ ಪ್ಲಸ್ ಅಡಿಯಲ್ಲಿ ಉಚಿತವಾಗಿ ಕೌಶಲ್ಯ ತರಬೇತಿ ನೀಡಲು ಫೆಬ್ರವರಿ 26 ರಂದು ಒಂದು ದಿನದ ಅರಿವು ಮೂಡಿಸುವ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ.

ಅಂದು ಕೊಪ್ಪಳ ಅಶೋಕ ವೃತ್ತ ಹತ್ತಿರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಹಿಂಭಾಗದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಕಾರ್ಯಾಗಾರ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಯುವನಿಧಿ ಫಲಾನುಭವಿಗಳು ಕಡ್ಡಾಯವಾಗಿ ಹಾಜರಾಗಿ ಈ ಕಾರ್ಯಕ್ರಮದ ಸದುಪಯೋಗಪಡಿಸಿಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande