ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಬೃಹತ್ ಪ್ರತಿಭಟನೆ
ಉಂಟಾಯಿತು
Protest


ಧಾರವಾಡ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಖಾಲಿ ಹುದ್ದೆಗಳ ನೇಮಕಾತಿ ಹಾಗೂ ವಯೋಮಿತಿ ಸಡಿಲಿಕೆ ಸೇರಿದಂತೆ ನಾನಾ ಬೇಡಿಕೆಗಳನ್ನು ಮುಂದಿರಿಸಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಧಾರವಾಡ ನಗರದಲ್ಲಿ ಭಾರಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕಿದ ವಿದ್ಯಾರ್ಥಿಗಳು ತಕ್ಷಣ ನೇಮಕಾತಿ ಪ್ರಕ್ರಿಯೆ ಆರಂಭಿಸುವಂತೆ ಆಗ್ರಹಿಸಿದರು.

ಪ್ರತಿಭಟನೆ ಶ್ರೀನಗರ ವೃತ್ತದಲ್ಲಿ ಆರಂಭವಾಗಿ ಜಯನಗರ ವೃತ್ತದವರೆಗೆ ವ್ಯಾಪಿಸಿತು. ಕೈಯಲ್ಲಿ ಫಲಕಗಳನ್ನು ಹಿಡಿದು ರ‍್ಯಾಲಿ ನಡೆಸಿದ ಪ್ರತಿಭಟನಾಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಮುನ್ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಹಿಡಿಯಲು ಮುಂದಾದ ಪರಿಣಾಮ ಕೆಲಕಾಲ ತಳ್ಳಾಟ-ನುಗ್ಗಾಟದ ಸ್ಥಿತಿ ಉಂಟಾಯಿತು. ಮಿಷನ್ ಕಾಂಪೌಂಡ್ ಕಡೆಗೆ ಸಾಗಬೇಕಿದ್ದ ರ‍್ಯಾಲಿಯನ್ನು ಪೊಲೀಸರು ನಿಲ್ಲಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವಿದ್ಯಾರ್ಥಿ ಸಂಘಟನೆ ಅಧ್ಯಕ್ಷ ಕಾಂತಕುಮಾರ್ ಅವರನ್ನು ಪರಿಸ್ಥಿತಿ ತೀವ್ರಗೊಂಡ ಹಿನ್ನೆಲೆ ಪೊಲೀಸರು ವಶಕ್ಕೆ ಪಡೆದು ಕರೆದೊಯ್ದರು. ಇದಕ್ಕೆ ಆಕ್ರೋಶಗೊಂಡ ವಿದ್ಯಾರ್ಥಿಗಳು ವಾಹನಕ್ಕೆ ಮುತ್ತಿಗೆ ಹಾಕಿ ಬಿಡುಗಡೆಗೆ ಒತ್ತಾಯಿಸಿದರು.

ಉದ್ಯೋಗಾಕಾಂಕ್ಷಿಗಳ ಹೋರಾಟಕ್ಕೆ ಶಾಸಕ ಅರವಿಂದ್ ಬೆಲ್ಲದ್, ಪ್ರತಿಪಕ್ಷ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಹಾಗೂ ಆರ್. ಅಶೋಕ್ ಸೇರಿದಂತೆ ಹಲವು ಬಿಜೆಪಿ ನಾಯಕರು ಬೆಂಬಲ ಸೂಚಿಸಿದರು.

ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಟೀಕೆ ನಡೆಸಿ, ಪ್ರಣಾಳಿಕೆಯಲ್ಲಿ 1 ಲಕ್ಷ ಹುದ್ದೆ ಭರ್ತಿ ಮಾಡುವ ಭರವಸೆ ನೀಡಿದ್ದರೂ ಎರಡೂವರೆ ವರ್ಷವಾದರೂ ನೇಮಕಾತಿ ಆಗಿಲ್ಲ ಎಂದು ಆರೋಪಿಸಿದರು.

ರಾಜ್ಯದಲ್ಲಿ ಸುಮಾರು 2.81 ಲಕ್ಷ ಹುದ್ದೆಗಳು ಖಾಲಿ ಇವೆ ಎಂದು ಹೇಳಿ, ಕೇಂದ್ರ ಸರ್ಕಾರವನ್ನು ಪ್ರಶ್ನಿಸುವ ಬದಲು ರಾಜ್ಯ ಸರ್ಕಾರವೇ ನೇಮಕಾತಿ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande