ಜಿಲ್ಲೆಯಲ್ಲಿ ಫೆ. 26 ರಿಂದ 28 ರವರೆಗೆ ರಸ್ತೆ ಸಂಚಾರ ಗಣತಿ
ಕೊಪ್ಪಳ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಜಿಲ್ಲಾ ಲೋಕೋಪಯೋಗಿ ಇಲಾಖೆಯಿಂದ ಪ್ರತಿ ವರ್ಷಕ್ಕೊಮ್ಮೆ ಎರಡು ದಿನಗಳವರೆಗೆ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಅದರಂತೆ ಜಿಲ್ಲೆಯಲ್ಲಿ 2025-26 ನೇ ಸಾಲಿನ ರಸ್ತೆ ಸಂಚಾರ ಗಣ
ಜಿಲ್ಲೆಯಲ್ಲಿ ಫೆ. 26 ರಿಂದ 28 ರವರೆಗೆ ರಸ್ತೆ ಸಂಚಾರ ಗಣತಿ


ಕೊಪ್ಪಳ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಜಿಲ್ಲಾ ಲೋಕೋಪಯೋಗಿ ಇಲಾಖೆಯಿಂದ ಪ್ರತಿ ವರ್ಷಕ್ಕೊಮ್ಮೆ ಎರಡು ದಿನಗಳವರೆಗೆ ರಾಜ್ಯ ಹೆದ್ದಾರಿಗಳು ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ವಾಹನ ಸಂಚಾರ ಗಣತಿ ಕಾರ್ಯವನ್ನು ಕೈಗೊಳ್ಳಲಾಗುತ್ತದೆ. ಅದರಂತೆ ಜಿಲ್ಲೆಯಲ್ಲಿ 2025-26 ನೇ ಸಾಲಿನ ರಸ್ತೆ ಸಂಚಾರ ಗಣತಿಯನ್ನು ಫೆಬ್ರವರಿ 26 ರ ಬೆಳಿಗ್ಗೆ 6 ಗಂಟೆಯಿಂದ ಫೆ.28 ರ ಬೆಳಿಗ್ಗೆ 6 ಗಂಟೆಯವರೆಗೆ ನಡೆಸಲಾಗುತ್ತದೆ.

ಈ ಸಮೀಕ್ಷೆಯಿಂದ ಸಂಗ್ರಹಿಸಿದ ಮಾಹಿತಿಯಿಂದ ಸರ್ಕಾರಕ್ಕೆ ರಸ್ತೆಗಳ ಸಂಚಾರ ಸಾಂದ್ರತೆ, ಸಂಚಾರ ತೀವ್ರತೆ ಕಂಡು ಹಿಡಿಯುವುದಕ್ಕೆ ರಸ್ತೆಗಳ ಅಗಲ ಅಳತೆ ನಿರ್ಧರಿಸಲು ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ರಸ್ತೆಗಳ ಸ್ಥಿತಿಗತಿ ಸುಧಾರಿಸಲು ಅನುಕೂಲವಾಗುತ್ತದೆ.

ರಾಜ್ಯ ಹೆದ್ದಾರಿ ಹಾಗೂ ಜಿಲ್ಲಾ ಮುಖ್ಯ ರಸ್ತೆಗಳ ಮೇಲೆ ರಸ್ತೆ ಸಂಚಾರ ಸಮೀಕ್ಷೆ ಅಂಗವಾಗಿ ರಸ್ತೆಗಳ ಮೇಲೆ ಕ್ಯಾಮೆರಾ ಸಮೇತ ಸಮೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗುತ್ತದೆ. ಸಮೀಕ್ಷಾ ಕೇಂದ್ರಗಳಿದ್ದರೆ ವಾಹನ ರಸ್ತೆ ಸಂಚಾರ ಸಮೀಕ್ಷೆ ಕೇಂದ್ರವಿದೆ, ತಮ್ಮ ವಾಹನಗಳನ್ನು ನಿಧಾನವಾಗಿ ಚಲಿಸಿ ಎಂದು ಸೂಚನಾ ಫಲಕಗಳನ್ನು ಅಳವಡಿಸಿರುತ್ತಾರೆ. ಎಲ್ಲಾ ವಾಹನ ಚಾಲಕರು ತಮ್ಮ ವಾಹನವನ್ನು ನಿಧಾನವಾಗಿ ಸಾಗಿಸಿಕೊಂಡು ಮುಂದೆ ಸಾಗಿಸಿ ಸಹಕಾರ ನೀಡುವಂತೆ ಕೊಪ್ಪಳ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande