
ಬೆಂಗಳೂರು, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜ್ಯದಾದ್ಯಂತ ಇಂದು ಸಾಮಾನ್ಯವಾಗಿ ಒಣಹವೆ ಮುಂದುವರಿಯುವ ಸಾಧ್ಯತೆ ಇದ್ದು, ಕೆಲವೆಡೆ ಮೋಡ ಕವಿದ ವಾತಾವರಣ ಕಾಣಿಸಿಕೊಳ್ಳಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ ತಿಳಿಸಿದೆ.
ಕೇಂದ್ರವು ಬಿಡುಗಡೆ ಮಾಡಿದ ದಿನದ ಹವಾಮಾನ ಭವಿಷ್ಯ ವರದಿ ಪ್ರಕಾರ, ದಕ್ಷಿಣ ಒಳನಾಡು ಹಾಗೂ ಮಲೆನಾಡು ಭಾಗಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಮಲೆನಾಡಿನ ಎತ್ತರ ಪ್ರದೇಶಗಳಲ್ಲಿ ಸಾಯಂಕಾಲ ಅಥವಾ ರಾತ್ರಿ ವೇಳೆ ಹಗುರ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿಯಲಿದ್ದು, ದಿನದ ತಾಪಮಾನದಲ್ಲಿ ಸ್ವಲ್ಪ ಏರಿಳಿತ ಕಾಣಿಸಬಹುದು. ಬೆಳಿಗ್ಗೆ ಮತ್ತು ರಾತ್ರಿ ವೇಳೆಯಲ್ಲಿ ತಂಪು ಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.
ಮಲೆನಾಡು ಭಾಗದ ರೈತರು ಹಗುರ ಮಳೆಯ ಸಾಧ್ಯತೆಯನ್ನು ಗಮನಿಸಿ ಬೆಳೆ ಸಂರಕ್ಷಣಾ ಕ್ರಮ ಕೈಗೊಳ್ಳುವುದು ಸೂಕ್ತ ಮತ್ತು ದಿನದ ಹೊತ್ತಿನಲ್ಲಿ ಉಷ್ಣಾಂಶ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa