ನೇಮಕಾತಿ ಆರಂಭಿಸದಿದಲ್ಲಿ ರಾಜ್ಯವ್ಯಾಪಿ ಹೋರಾಟ : ಅಶೋಕ್
ಧಾರವಾಡ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಉದ್ಯೋಗಾವಕಾಶಕ್ಕೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಧಾರವಾಡ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಹಾಗೂ ಪದವೀಧರರು ಸರ್ಕಾರವು ತಕ್ಷಣ ಖಾಲಿ ಹುದ್ದೆಗಳ ಭರ್ತಿ
ನೇಮಕಾತಿ ಆರಂಭಿಸದಿದಲ್ಲಿ ರಾಜ್ಯವ್ಯಾಪಿ ಹೋರಾಟ : ಅಶೋಕ್


ಧಾರವಾಡ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಉದ್ಯೋಗಾವಕಾಶಕ್ಕೆ ಆಗ್ರಹಿಸಿ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವಕರು ಧಾರವಾಡ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳು ಹಾಗೂ ಪದವೀಧರರು ಸರ್ಕಾರವು ತಕ್ಷಣ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ಕಳೆದ ಎರಡೂವರೆ ವರ್ಷಗಳಲ್ಲಿ ಒಬ್ಬ ನಿರುದ್ಯೋಗಿಗೂ ಉದ್ಯೋಗ ನೀಡಿಲ್ಲ ಎಂದು ಆರೋಪಿಸಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕಾರದ ಕಚ್ಚಾಟದಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಟೀಕಿಸಿದರು.

ರಾಜ್ಯ ಸರ್ಕಾರ ದಿವಾಳಿಯಾಗಿದೆ, ಸರ್ಕಾರಿ ನೌಕರರಿಗೆ ಸಂಬಳ ನೀಡಲು ಸಹ ಹಣವಿಲ್ಲದ ಸ್ಥಿತಿ ಉಂಟಾಗಿದೆ ಎಂದು ಆರೋಪಿಸಿದ ಅವರು, ರಾಜ್ಯದಲ್ಲಿ ಸುಮಾರು 2.5 ಲಕ್ಷಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳು ಖಾಲಿ ಇವೆ ಎಂದರು. ಹಣಕಾಸು ಇಲಾಖೆ 65,000 ಹುದ್ದೆಗಳನ್ನು ಭರ್ತಿ ಮಾಡಲು ಆದೇಶ ನೀಡಿ ಆರು ತಿಂಗಳು ಕಳೆದರೂ ಒಂದು ಸಂದರ್ಶನವೂ ನಡೆದಿಲ್ಲ ಎಂದರು.

ತಕ್ಷಣವೇ ನೇಮಕಾತಿ ಪ್ರಕ್ರಿಯೆಗಳನ್ನು ಆರಂಭಿಸದಿದ್ದರೆ ರಾಜ್ಯವ್ಯಾಪಿ ಹೋರಾಟವನ್ನು ಹಮ್ಮಿಕೊಳ್ಳುವುದಾಗಿ ಅಶೋಕ ಎಚ್ಚರಿಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ನಗರದಲ್ಲಿ ಭಾರಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande