ಮಹಿಳೆಯರ ಮೇಲೆ ಹರಿದ ಸಾರಿಗೆ ಬಸ್
ಗದಗ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಗದಗ ನಗರದ ಗದಗ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಮಹಿಳೆಯರ ಮೇಲೆ ಸಾರಿಗೆ ಸಂಸ್ಥೆಯ ಬಸ್ ಹರಿದ ಘಟನೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಹಿಡಿದಿದೆ. ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಮಹಿಳೆಯರು ಬಸ್ ನಿಲ್ದಾಣದಿಂದ ಹೊರಗೆ ಹೊರಟು ಹ
ಫೋಟೋ


ಗದಗ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಗದಗ ನಗರದ ಗದಗ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ಭಯಾನಕ ಅಪಘಾತ ಸಂಭವಿಸಿದ್ದು, ಮಹಿಳೆಯರ ಮೇಲೆ ಸಾರಿಗೆ ಸಂಸ್ಥೆಯ ಬಸ್ ಹರಿದ ಘಟನೆ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಹಿಡಿದಿದೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಮಹಿಳೆಯರು ಬಸ್ ನಿಲ್ದಾಣದಿಂದ ಹೊರಗೆ ಹೊರಟು ಹೋಗುತ್ತಿದ್ದ ವೇಳೆ, ಪ್ಲಾಟ್ಫಾರಂ ಕಡೆಗೆ ಬರುತ್ತಿದ್ದ ಬಸ್ ಚಾಲಕನ ನಿರ್ಲಕ್ಷ್ಯದಿಂದ ಮಹಿಳೆಯರ ಮೇಲೆ ಬಸ್ ಹರಿದಿದೆ.

ಈ ಅಪಘಾತದಲ್ಲಿ ಇಬ್ಬರು ಮಹಿಳೆಯರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆಯ ಕಾಲಿಗೆ ಗಂಭೀರ ಗಾಯವಾಗಿದೆ. ಗಾಯಾಳು ಮಹಿಳೆಯರನ್ನು ತಕ್ಷಣವೇ ಗದಗ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದ ದೃಶ್ಯ ಸಿಸಿ ಟಿವಿಯಲ್ಲಿ ಸ್ಪಷ್ಟವಾಗಿ ದಾಖಲಾಗಿದ್ದು, ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನುವ ಆರೋಪಗಳು ಕೇಳಿಬಂದಿವೆ.

ಈ ಘಟನೆ ಬಡಾವಣೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ ತನಿಖೆ ಕೈಗೊಂಡಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / lalita MP


 rajesh pande