
ಬೀದರ್, 24 ಫೆಬ್ರವರಿ (ಹಿ.ಸ.):
ಆ್ಯಂಕರ್:
ಭಾಲ್ಕಿ ನಗರದ ಸಮಗ್ರ ಅಭಿವೃದ್ಧಿಗೆ ಸದಾ ಬದ್ಧವಾಗಿರುವುದಾಗಿ ಸಚಿವಈಶ್ವರ ಖಂಡ್ರೆ ಹೇಳಿದರು.
ಸುಮಾರು ₹3.20 ಕೋಟಿ ಅನುದಾನದಡಿ, ಭಾಲ್ಕಿ ನಗರದ ದಾದರ್ ಬಳಿಯ ರಸ್ತೆ ಅಭಿವೃದ್ಧಿ ಹಾಗೂ ಡಾ. ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ಮಹಾತ್ಮಾ ಗಾಂಧಿ ವೃತ್ತದವರೆಗೆ ರಸ್ತೆ ಮರುಡಾಂಬರೀಕರಣ ಕಾಮಗಾರಿಗೆ ಇಂದು ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು,
ಈಗಾಗಲೇ ಭಾಲ್ಕಿ ತಾಲೂಕು ಸೇರಿದಂತೆ ನಗರದ ಎಲ್ಲಾ ವಾರ್ಡುಗಳಲ್ಲಿ ಗುಣಮಟ್ಟದ ರಸ್ತೆಗಳ ನಿರ್ಮಾಣ ಮಾಡಲಾಗಿದೆ. ಹಲವು ಕಡೆಗಳಲ್ಲಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಕೆಲವೆಡೆ ರಸ್ತೆ ಸ್ವಲ್ಪ ಮಟ್ಟದಲ್ಲಿ ಹಾಳಾಗಿರುವುದು ಗಮನಕ್ಕೆ ಬಂದ ತಕ್ಷಣವೇ ಅಗತ್ಯ ಅನುದಾನವನ್ನು ಮೀಸಲಿಟ್ಟು, ಇಂದು ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದರು.
ಸಾರ್ವಜನಿಕರ ಸುಗಮ ಸಂಚಾರ, ಸುರಕ್ಷತೆ ಮತ್ತು ನಗರ ಸೌಂದರ್ಯಕ್ಕೆ ಆದ್ಯತೆ ನೀಡಿ, ಭಾಲ್ಕಿಯ ದೀರ್ಘಕಾಲಿಕ ಹಾಗೂ ಸಮತೋಲನದ ಅಭಿವೃದ್ಧಿಗೆ ನಾನು ನಿರಂತರವಾಗಿ ಶ್ರಮಿಸುತ್ತೇನೆ ಎಂದು ಸಚಿವರು ಭರವಸೆ ನೀಡಿದರು.
---------------
ಹಿಂದೂಸ್ತಾನ್ ಸಮಾಚಾರ್ / Rakesh Mahadevappa