ಧಾರವಾಡದಲ್ಲಿ ಗುಡಿ ಕೈಗಾರಿಕೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ
ಧಾರವಾಡ, 24 ಫೆಬ್ರವರಿ (ಹಿ.ಸ.) : ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದಿಂದ 2025-26 ನೇ ಸಾಲಿನ ವಸ್ತುಪ್ರದರ್ಶನ ಯೋಜನೆಯಡಿ ಫೆಬ್ರವರಿ 24 ರಿಂದ 28, 2026 ರವರೆಗೆ ಆಯೋಜಿಸಿರುವ ಜಿಲ್ಲಾ ಮಟ್ಟದ ಕುಶಲಕರ್ಮಿಗಳ ಹಾಗೂ ಗುಡಿ ಕೈಗಾರಿಕೆಗಳ ಉತ್ಪನ್ನಗಳ ವಸ್ತುಪ್ರದರ
Exhibition


ಧಾರವಾಡ, 24 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಧಾರವಾಡ ಜಿಲ್ಲಾ ಪಂಚಾಯತ್ ಗ್ರಾಮೀಣ ಮತ್ತು ಸಣ್ಣ ಉದ್ಯಮ ವಿಭಾಗದಿಂದ 2025-26 ನೇ ಸಾಲಿನ ವಸ್ತುಪ್ರದರ್ಶನ ಯೋಜನೆಯಡಿ ಫೆಬ್ರವರಿ 24 ರಿಂದ 28, 2026 ರವರೆಗೆ ಆಯೋಜಿಸಿರುವ ಜಿಲ್ಲಾ ಮಟ್ಟದ ಕುಶಲಕರ್ಮಿಗಳ ಹಾಗೂ ಗುಡಿ ಕೈಗಾರಿಕೆಗಳ ಉತ್ಪನ್ನಗಳ ವಸ್ತುಪ್ರದರ್ಶನ ಮತ್ತು ಮಾರಾಟ ಮೇಳವನ್ನು ಧಾರವಾಡದ ಕರ್ನಾಟಕ ಕಾಲೇಜ (ಕೆಸಿಡಿ) ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್ ಲಾಡ್ ಅವರು ಉದ್ಘಾಟಿಸಿದರು.

ಪ್ರದರ್ಶನದಲ್ಲಿ ಭಾಗವಹಿಸಿದ್ದ ಗುಡಿಕಾರರು ಹಾಗೂ ಸ್ವ ಸಹಾಯ ಸಂಘಗಳ ಸದಸ್ಯರೊಂದಿಗೆ ಮಾತನಾಡಿ, ವಸ್ತುಗಳನ್ನು ಹೇಗೆ ತಯಾರಿಸುತ್ತೀರಿ, ಕಚ್ಚಾ ಸಾಮಗ್ರಿ ಎಲ್ಲಿಂದ ತರುತ್ತೀರಿ, ದಿನನಿತ್ಯದ ಉತ್ಪಾದನೆ ಎಷ್ಟು, ವ್ಯಾಪಾರದ ಸ್ಥಿತಿ ಹೇಗಿದೆ ಎಂಬ ಬಗ್ಗೆ ವಿವರವಾಗಿ ವಿಚಾರಿಸಿ, ಮಾಹಿತಿ ಪಡೆದುಕೊಂಡರು.

ಪ್ರದರ್ಶನ ಮತ್ತು ಮಾರಾಟ ಮೇಳದಲ್ಲಿ ಒಟ್ಟು 32 ಮಳಿಗೆಗಳು ಸ್ಥಾಪಿಸಲ್ಪಟ್ಟಿದ್ದು, ಕೈಗಾರಿಕಾ ವಸ್ತುಗಳು, ಗೃಹೋಪಯೋಗಿ ಸಾಮಗ್ರಿಗಳು, ಆಹಾರ ಪದಾರ್ಥಗಳು, ಹಸ್ತಕಲಾ ವಸ್ತುಗಳು ಸೇರಿದಂತೆ ವಿವಿಧ ಉತ್ಪನ್ನಗಳನ್ನು ಪ್ರದರ್ಶನಕ್ಕೆ ಮತ್ತು ಮಾರಾಟಕ್ಕೆ ಇರಿಸಲಾಗಿತ್ತು. ಸಾರ್ವಜನಿಕರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದ್ದು, ಸಾರ್ವಜನಿಕರು ಸ್ಥಳದಲ್ಲೇ ವಸ್ತುಗಳನ್ನು ಖರೀದಿಸಿದರು.

ಸಚಿವ ಸಂತೋಷ ಲಾಡ್ ಅವರಿಗೆ ಇಷ್ಟವಾದ ಕೆಲವು ವಸ್ತುಗಳನ್ನು ಅವರು ಸ್ವತಃ ಖರೀದಿಸಿ, ಸ್ಥಳೀಯ ಕಲಾವಿದರು ಹಾಗೂ ಉದ್ಯಮಿಗಳನ್ನು ಪ್ರೋತ್ಸಾಹಿಸಿದರು. ಈ ವಸ್ತು ಪ್ರದರ್ಶನವು ಸಣ್ಣ ಉದ್ಯಮಿಗಳಿಗೆ ತಮ್ಮ ಉತ್ಪನ್ನಗಳನ್ನು ಪರಿಚಯಿಸಲು ಹಾಗೂ ಆದಾಯವನ್ನು ಹೆಚ್ಚಿಸಿಕೊಳ್ಳಲು ಉತ್ತಮ ವೇದಿಕೆಯಾಗಿದೆ ಎಂದು ಅವರು ಹೇಳಿದರು.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande