
ಬೀದರ್, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ರಾಷ್ಟ್ರೀಯ ಅಧ್ಯಕ್ಷರಾಗಿ ಸಚಿವ ಈಶ್ವರ ಖಂಡ್ರೆ ಅವಿರೋಧವಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ, ಬೀದರ ಜಿಲ್ಲೆಯ ಅನುದಾನ ರಹಿತ ಶಾಲಾ ಆಡಳಿತ ಮಂಡಳಿಯ ಸಂಘದ ವತಿಯಿಂದ ಹಳ್ಳಿಖೇಡ ಪಟ್ಟಣದಲ್ಲಿ ಆಯೋಜಿಸಲಾದ ಅಭಿನಂದನಾ ಸಮಾರಂಭದಲ್ಲಿ ಅವರು ಭಾಗವಹಿಸಿ ಸನ್ಮಾನ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ವೀರಶೈವ–ಲಿಂಗಾಯತ ಸಮಾಜದ ಶ್ರೇಷ್ಠ ಪರಂಪರೆ, ಶಿಕ್ಷಣದ ವಿಸ್ತರಣೆ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೊಂದಿಗೆ ಕೈಜೋಡಿಸಿ ಕಾರ್ಯನಿರ್ವಹಿಸುವ ಬದ್ಧತೆಯನ್ನು ವ್ಯಕ್ತಪಡಿಸಿದರು. ಸಮಾಜದ ಏಕತೆ ಮತ್ತು ಸಂಘಟಿತ ಶಕ್ತಿ ಮೂಲಕ ಯುವಪೀಳಿಗೆಗೆ ಉತ್ತಮ ಅವಕಾಶಗಳನ್ನು ಕಲ್ಪಿಸುವುದು ತನ್ನ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದರು.
ತಮ್ಮ ಮೇಲೆ ವಿಶ್ವಾಸವಿಟ್ಟು ಗೌರವ ಸಲ್ಲಿಸಿದ ಸಂಘದ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಸಮಸ್ತ ಸಮಾಜದ ಬಂಧುಗಳಿಗೆ ಅವರು ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa