
ಬೆಂಗಳೂರು, 24 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಜ್ಯದ ಸರ್ಕಾರಿ ಆಸ್ಪತ್ರೆಗಳ ಸ್ಥಿತಿಗತಿಗಳ ಕುರಿತು ತೀವ್ರ ಆತಂಕ ವ್ಯಕ್ತಪಡಿಸಿರುವ ಪ್ರತಿ ಪಕ್ಷದ ನಾಯಕ ಆರ್ ಅಶೋಕ ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಮುಖ್ಯಮಂತ್ರಿಗಳೆ ಸರ್ಕಾರಿ ಆಸ್ಪತ್ರೆ ಬಚಾವೋ ಸಮಾವೇಶವನ್ನು ಯಾವಾಗ ಆಯೋಜಿಸುತ್ತೀರಿ” ಎಂದು ಪ್ರಶ್ನಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಔಷಧಿಗಳು ಲಭ್ಯವಿಲ್ಲದೆ ರೋಗಿಗಳಿಗೆ ಹೊರಗಡೆ ಖರೀದಿಸಲು ಚೀಟಿ ಬರೆದುಕೊಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಬಾಕಿ ಬಿಲ್ಗಳ ಕಾರಣದಿಂದ ಸ್ಕ್ಯಾನಿಂಗ್ ಸೇವೆಗಳು ಸ್ಥಗಿತಗೊಂಡಿವೆ, ಕೆಲವೆಡೆ ಹೊರರೋಗಿ ವಿಭಾಗಗಳ ಕಾರ್ಯಾಚರಣೆಗೂ ಅಡಚಣೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ದುರಾಡಳಿತ ಮತ್ತು ಆರ್ಥಿಕ ವೈಫಲ್ಯದಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇನ್ನೆಷ್ಟು ದಿನ ಈ ಪರಿಸ್ಥಿತಿ ಮುಂದುವರಿಯಲಿದೆ ತಕ್ಷಣ ಕ್ರಮ ಕೈಗೊಳ್ಳಬೇಕು,” ಎಂದು ಅವರು ಒತ್ತಾಯಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa