
ವಿಜಯಪುರ, 25 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಅಂಗನವಾಡಿ ಸುತ್ತಮುತ್ತಲಿನ ಪ್ರದೇಶವನ್ನು ತುರ್ತಾಗಿ ಶುಚಿಗೊಳಿಸಲು ಜಿಲ್ಲಾಧಿಕಾರಿ ಡಾ. ಆನಂದ ಕೆ. ಅವರು ಸೂಚನೆ ನೀಡಿದರು.
ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದ ಕಡಣಿ ರಸ್ತೆಯಲ್ಲಿರುವ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿ ಪಟ್ಟಣ ಪಂಚಾಯತಿ ಮುಖ್ಯಧಿಕಾರಿಗೆ ಜಿಲ್ಲಾಧಿಕಾರಿ ಸೂಚಿಸಿದರು.
ಬಳಿಕ ಅಂಗನವಾಡಿಯಲ್ಲಿ ಮಕ್ಕಳ ಕಲಿಕಾ ಗುಣಮಟ್ಟ ಹಾಗೂ
ಊಟದ ವ್ಯವಸ್ಥೆ ಪರಿಶೀಲಿಸಿದ ಅವರು, ಕೇಂದ್ರದಲ್ಲಿ ಪ್ರತ್ಯೇಕ ಅಡುಗೆ ಕೊಠಡಿ ನಿರ್ಮಾಣಕ್ಕೆ ಸೂಚನೆ ನೀಡಿದರು.
ಇದಕ್ಕೂ ಮುನ್ನ ಆಲಮೇಲ ತಹಸೀಲ್ದಾರ್ ಕಚೇರಿಗೆ ಭೇಟಿ ನೀಡಿ, ಕಂದಾಯ ಇಲಾಖೆಯ ಪ್ರಗತಿ ಪರಿಶೀಲಿಸಿದರು. ಕಂದಾಯ ಗ್ರಾಮ, ಈ ಪೌತಿ, ದರಕಾಸ್ತ್ ಫೋಡಿ, ಭೂಸುರಕ್ಷಾ ಯೋಜನೆ ಇತರೆ ವಿಷಯಗಳ ಬಗ್ಗೆ ಚರ್ಚಿಸಿದರು.
ಬಳಿಕ ತಹಸೀಲ್ದಾರ್ ಕಚೇರಿ ಪ್ರತಿ ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು. ಎಲ್ಲ ಅಧಿಕಾರಿ,ಸಿಬ್ಬಂದಿ ಕಾರ್ಯವೈಖರಿ ಪರಿಶೀಲಿಸಿ, ಸಾರ್ವಜನಿಕ ಅರ್ಜಿಗಳನ್ನು, ಕುಂದು ಕೊರತೆಗಳನ್ನು ತಕ್ಷಣ ವಿಲೇವಾರಿಗೊಳಿಸಲು ಜಿಲ್ಲಾಧಿಕಾರಿ ಸೂಚಿಸಿದರು.
ನಂತರ ತಾಲೂಕು ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದ ಜಿಲ್ಲಾಧಿಕಾರಿಗಳು, ಆಲಮೇಲ ಪಟ್ಟಣದ ಜನತೆಗೆ ಕುಡಿಯುವ ನೀರು ಪೂರೈಸಲು ಜಲಧಾರೆ ಸ್ಕೀಂ ಅನುಷ್ಠಾನಗೊಳಿಸಲು ಜಲಮಂಡಳಿ ಅಧಿಕಾರಿಗಳಿಗೆ ಸೂಚಿಸಿದರು.
ಬಳಿಕ ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಡಾ. ಅಂಬೇಡ್ಕರ್ ವೃತ್ತದಲ್ಲಿರುವ ಅತಿಕ್ರಮಣ ಜಾಗ ತೆರುವುಗೊಳಿಸಲು ಒತ್ತಾಯಿಸಿ ಸಾರ್ವಜನಿಕರು ನೀಡಿದ ಮನವಿ ಸ್ವೀಕರಿಸಿದರು.
ಬಳಿಕ ಆಲಮೇಲ ಪಟ್ಟಣದ ದ್ರಾಕ್ಷಿ ಬೆಳೆಗಾರರ ಸಂಘದ ಪದಾಧಿಕಾರಿಗಳು ನೀಡಿದ ಮನವಿ ಸ್ವೀಕರಿಸಿದರು.
ನಂತರ ಆಲಮೇಲದ ಸರಕಾರಿ ಆಸ್ಪತ್ರೆಗೆ ತೆರಳಿ, ವೈದ್ಯಾಧಿಕಾರಿಗಳೊಂದಿಗೆ ಸಮಾಲೋಚಿಸಿ, ರೋಗಿಗಳಿಗೆ ಸಕಾಲಕ್ಕೆ ಚಿಕಿತ್ಸೆ ನೀಡುವಂತೆ ಸೂಚಿಸಿದರು.
ಈ ಸಂದರ್ಭದಲ್ಲಿತಹಸೀಲ್ದಾರ್ ಎಮ್. ಎಸ್. ಅರಕೇರಿ, ಪಪಂ ಮುಖ್ಯಾಧಿಕಾರಿ ಸುರೇಶ ನಾಯಕ ಹಾಗೂ ಇತರೆ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / jyothi deshpande