ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
ಕೊಪ್ಪಳ, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ಕೊಪ್ಪಳ ತಾಲೂಕಿನ ದದೇಗಲ್ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಡಿಪ್ಲೊಮಾ ಟೂಲ್ ಮತ್ತು
ಜಿಟಿಟಿಸಿ : ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ


ಕೊಪ್ಪಳ, 25 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಕೊಪ್ಪಳ ತಾಲೂಕಿನ ದದೇಗಲ್ನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಡಿ.ಟಿ.ಡಿ.ಎಮ್, ಡಿ.ಎಮ್.ಸಿ.ಹೆಚ್ ಮತ್ತು ಇ&ಸಿ ವಿಭಾಗದಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಡಿಪ್ಲೊಮಾ ಟೂಲ್ ಮತ್ತು ಡೈ ಮೇಕಿಂಗ್(ಡಿ.ಟಿ.ಡಿ.ಎಮ್), ಪೋಸ್ಟ್ ಡಿಪ್ಲೊಮಾ ಇನ್ ಟೂಲ್ ಡಿಸೈನ್(ಪಿ.ಟಿ.ಡಿ.ಟಿ), ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆ ಹೊಂದಿದ ಆಸಕ್ತ ಅಭ್ಯರ್ಥಿಗಳು ಮಾರ್ಚ್ 6 ರೊಳಗಾಗಿ ಜಿಟಿಟಿಸಿ ಕೊಪ್ಪಳ ಕಛೇರಿಗೆ ಅರ್ಜಿ ಸಲ್ಲಿಸಬಹುದು ಅಥವಾ ಇ-ಮೇಲ್ ಐಡಿ: gttckoppal@gmail.com ಗೆ ನಿಮ್ಮ ಸ್ವ-ವಿವರವುಳ್ಳ ಬಯೋಡೆಟಾವನ್ನು ಕಳುಹಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಲಯ ಅಥವಾ ಮೌನೇಶ್, ವಿಭಾಗದ ಮುಖ್ಯಸ್ಥರು, ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ, ಗದಗ ರೋಡ್, ದದೇಗಲ್, ಮೊ. ಸಂಖ್ಯೆ-7507094445 ಗೆ ಸಂಪರ್ಕಿಸಬಹುದು ಎಂದು ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande