ಆರೋಗ್ಯ ಕೇಂದ್ರ ಉನ್ನತೀಕರಣಕ್ಕೆ ಚಾಲನೆ
ದಾವಣಗೆರೆ, 25 ಫೆಬ್ರವರಿ (ಹಿ.ಸ.): ಆ್ಯಂಕರ್: ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರೂ. 1 ಕೋಟಿ 25 ಲಕ್ಷ ವೆಚ್ಚದಲ್ಲಿ ಉನ್ನತೀಕರಿಸುವ ಹಾಗೂ ನೂತನ ಶೌಚಾಲಯಗಳ ನಿರ್ಮಾಣ ಕಾಮಗಾರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೂಮಿ ಪೂಜೆ ನೆರವೇರಿಸಿದರ
Health center


ದಾವಣಗೆರೆ, 25 ಫೆಬ್ರವರಿ (ಹಿ.ಸ.):

ಆ್ಯಂಕರ್:

ದಾವಣಗೆರೆ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕಿನ ನೀಲಗುಂದ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ರೂ. 1 ಕೋಟಿ 25 ಲಕ್ಷ ವೆಚ್ಚದಲ್ಲಿ ಉನ್ನತೀಕರಿಸುವ ಹಾಗೂ ನೂತನ ಶೌಚಾಲಯಗಳ ನಿರ್ಮಾಣ ಕಾಮಗಾರಿಗೆ ಸಂಸದೆ ಪ್ರಭಾ ಮಲ್ಲಿಕಾರ್ಜುನ ಭೂಮಿ ಪೂಜೆ ನೆರವೇರಿಸಿದರು.

ಇದೇ ಸಂದರ್ಭದಲ್ಲಿ ತೆಲಿಗಿ ಮತ್ತು ಹಲುವಾಗಲು ಗ್ರಾಮಗಳ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಸುಮಾರು ರೂ. 1 ಕೋಟಿ ವೆಚ್ಚದಲ್ಲಿ ದುರಸ್ತಿ, ಉನ್ನತೀಕರಣ ಮತ್ತು ಅಗತ್ಯ ವೈದ್ಯಕೀಯ ಉಪಕರಣಗಳ ಒದಗಿಸುವ ಕಾರ್ಯಗಳಿಗೆ ಚಾಲನೆ ನೀಡಲಾಯಿತು.

ಈ ಯೋಜನೆಗಳ ಮೂಲಕ ಗ್ರಾಮೀಣ ಭಾಗದ ಆರೋಗ್ಯ ಸೇವೆಗಳ ಗುಣಮಟ್ಟವನ್ನು ಮತ್ತಷ್ಟು ಬಲಪಡಿಸಿ, ಸಾರ್ವಜನಿಕರಿಗೆ ಸುಧಾರಿತ ಚಿಕಿತ್ಸೆ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಮಹತ್ವದ ಕಾರ್ಯ ಕೈಗೊಳ್ಳಲಾಯಿತು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande