
ಬಳ್ಳಾರಿ, 25 ಫೆಬ್ರವರಿ (ಹಿ.ಸ.)
ಆ್ಯಂಕರ್ : ಬಳ್ಳಾರಿ ನಗರದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಸಂಚಾರ ದಟ್ಟಣೆ, ಇದರಿಂದಾಗಿ ಸಾರ್ವಜನಿಕರಿಗೆ ಆಗುವ ಸಮಸ್ಯೆ ಹಾಗೂ ಪರಿಹಾರ ಕುರಿತು ಚರ್ಚಿಸಲು ಫೆ.26 ರಂದು ಸಂಜೆ 04 ಗಂಟೆಗೆ ನಗರದ ಬಿಡಿಎಎ ಮೈದಾನದ ಸಭಾಂಗಣದಲ್ಲಿ ಸಂಚಾರ ಸಮಸ್ಯೆ ಕುರಿತ ಸಭೆ ಆಯೋಜಿಸಲಾಗಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಅವರ ನೇತೃತ್ವದಲ್ಲಿ
ಮಹಾನಗರ ಪಾಲಿಕೆ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ, ಜೆಸ್ಕಾಂ ಇಲಾಖೆ, ಲೋಕೋಪಯೋಗಿ ಮತ್ತು ಕೆಕೆಆರ್ಟಿಸಿ ಸಹಯೋಗದಲ್ಲಿ ನಡೆಯಲಿದೆ.
ಸಭೆಗೆ ಛೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷರು ಹಾಗೂ ಸದಸ್ಯರು, ಕಿರಾಣಿ ಅಂಗಡಿ ವ್ಯಾಪಾರಸ್ಥರು, ಖಾಸಗಿ ಬಸ್ ಮಾಲೀಕರು- ಚಾಲಕರು, ಲಾರಿ ಸಂಘದ ಅಧ್ಯಕ್ಷರು ಹಾಗೂ ಸದಸ್ಯರು, ಆಟೋ ಯೂನಿಯನ್ ಅಧ್ಯಕ್ಷರು ಹಾಗೂ ಮಾಲೀಕ- ಚಾಲಕರು, ಟ್ಯಾಕ್ಸಿ ಸಂಘದ ಅಧ್ಯಕ್ಷರು ಹಾಗೂ ಮಾಲಿಕ- ಚಾಲಕರು, ಬೀದಿ ಬದಿ ವ್ಯಾಪಾರಸ್ಥರು ಮತ್ತು ನಗರದ ಸಾರ್ವಜನಿಕರು ಸಭೆಗೆ ಹಾಜರಾಗಿ ಸಲಹೆ- ಸೂಚನೆ ನೀಡಬಹುದು ಎಂದು ಸಂಚಾರ ಪೊಲೀಸ್ ಠಾಣೆಯ ಆರಕ್ಷಕ ನಿರೀಕ್ಷಕರು ತಿಳಿಸಿದ್ದಾರೆ.
---------------
ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್