ರಾಜ್ಯದಲ್ಲಿ ಇಂದು ಕೆಲವೆಡೆ ಮಳೆ ಮುನ್ಸೂಚನೆ
ಬೆಂಗಳೂರು, 25 ಫೆಬ್ರವರಿ (ಹಿ.ಸ.) : ಆ್ಯಂಕರ್ : ರಾಜ್ಯದಲ್ಲಿ ಕಳೆದ ರಾತ್ರಿ ಕೆಲವೆಡೆ ಗುಡುಗು-ಸಿಡಿಲು ಸಹಿತ ಮಳೆಯಾಗಿದೆ. ಧಾರವಾಡ,ಹುಬ್ಬಳ್ಳಿ, ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ
ರಾಜ್ಯದಲ್ಲಿ ಇಂದು ಕೆಲವೆಡೆ ಮಳೆ ಮುನ್ಸೂಚನೆ


ಬೆಂಗಳೂರು, 25 ಫೆಬ್ರವರಿ (ಹಿ.ಸ.) :

ಆ್ಯಂಕರ್ : ರಾಜ್ಯದಲ್ಲಿ ಕಳೆದ ರಾತ್ರಿ ಕೆಲವೆಡೆ ಗುಡುಗು-ಸಿಡಿಲು ಸಹಿತ ಮಳೆಯಾಗಿದೆ. ಧಾರವಾಡ,ಹುಬ್ಬಳ್ಳಿ, ರಾಯಚೂರು ಸೇರಿದಂತೆ ಹಲವೆಡೆ ಮಳೆಯಾಗಿದೆ.

ಹವಾಮಾನ ಇಲಾಖೆ ನೀಡಿರುವ ಮುನ್ಸೂಚನೆಯಂತೆ, ಇಂದೂ ಸಹ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಸಿಡಿಲು ಸಹಿತ ಲಘು ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಇಲಾಖೆ ತಿಳಿಸಿದೆ.

ಈ ಹಿನ್ನೆಲೆಯಲ್ಲಿ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಜೊತೆಗೆ ಮಲೆನಾಡು ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ.

ಯಾದಗಿರಿ, ರಾಯಚೂರು ಸೇರಿದಂತೆ ದಕ್ಷಿಣ ಭಾಗದ ಹಾಸನ, ಕೊಡಗು, ಮೈಸೂರು ಮತ್ತು ಚಿಕ್ಕಮಗಳೂರಿನಲ್ಲಿ ಗುಡುಗು-ಸಿಡಿಲು ಸಹಿತ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande