ರಾಜ್ಯ ಸರ್ಕಾರದಿಂದ ಖಾಲಿ ಹುದ್ದೆಗಳ ಭರ್ತಿ ಸಚಿವ ರಾಮಲಿಂಗಾರೆಡ್ಡಿ
ರಾಜ್ಯ ಸರ್ಕಾರದಿಂದ ಖಾಲಿ ಹುದ್ದೆಗಳ ಭರ್ತಿ ಸಚಿವ ರಾಮಲಿಂಗಾರೆಡ್ಡಿ
ರಾಮಲಿಂಗಾರೆಡ್ಡಿ, ಸಾರಿಗೆ ಸಚಿವರು.


ಕೋಲಾರ ೨೫ ಫೆಬ್ರವರಿ (ಹಿ.ಸ) :

ಆ್ಯಂಕರ್ : ರಾಜ್ಯ ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಂತೆ ದಾರವಾಡದಲ್ಲಿ ಉದ್ಯೋಗ ಆಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯ ಬಗ್ಗೆ ಕೋಲಾರ ಜಿಲ್ಲೆ ಕೆಜಿಎಫ್ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಉದ್ಯೋಗ ಅವಕಾಶಗಳ ಸೃಷ್ಠಿ ಅಗತ್ಯವಿದೆ. ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯ ಸರ್ಕಾರ ಈಗಾಗಲೆ ನಲವತ್ತು ಸಾವಿರ ಹುದ್ದೆಗಳನ್ನು ಭರ್ತಿ ಮಾಡಿದೆ. ಹಣಕಾಸು ಇಲಾಖೆ ಅನುಮೋದನೆ ನೀಡಿದ್ದು, ಅರವತ್ತು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ರಾಜ್ಯ ಸಾರಿಗೆ ಸಂಸ್ಥೆಯ ನಿಗಮಗಳಲ್ಲಿ ಹತ್ತು ಸಾವಿರ ಹುದ್ದೆಗಳನ್ನು ಭರ್ತಿ ಮಾಡಲಾಗಿದೆ ಎಂದು ತಿಳಿಸಿದರು.

ಚಿತ್ರ : ರಾಮಲಿಂಗಾರೆಡ್ಡಿ, ಸಾರಿಗೆ ಸಚಿವರು.

ಹಿಂದೂಸ್ತಾನ್ ಸಮಾಚಾರ್ / ಎಸ್.ಚಂದ್ರಶೇಖರ್


 rajesh pande