ಮಾ.01 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ
ಬಳ್ಳಾರಿ, 25 ಫೆಬ್ರವರಿ (ಹಿ.ಸ.): ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.01 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್
ಮಾ.01 ರಂದು ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ


ಬಳ್ಳಾರಿ, 25 ಫೆಬ್ರವರಿ (ಹಿ.ಸ.):

ಆ್ಯಂಕರ್ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಾ.01 ರಂದು ಸಂಜೆ 06.30 ಗಂಟೆಗೆ ನಗರದ ಡಾ.ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಸಭಾಂಗಣದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗಿದೆ.

ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದರಾದ ಈ.ತುಕರಾಮ್, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ರಾಜ್ಯಸಭೆ ಸದಸ್ಯ ಡಾ.ಸೈಯದ್ ನಾಸೀರ್ ಹುಸೇನ್, ಕರ್ನಾಟಕ ರಾಜ್ಯ ಸಹಕಾರ ಕೈಮಗ್ಗ ನೇಕಾರ ಮಹಾಮಂಡಳಿ ನಿಯಮಿತ(ಕಾವೇರಿ ಹ್ಯಾಂಡ್ಲೂಮ್ಸ್)ದ ಅಧ್ಯಕ್ಷರೂ ಆದ ಕಂಪ್ಲಿ ಶಾಸಕ ಜೆ.ಎನ್.ಗಣೇಶ್, ಡಾ.ಬಾಬು ಜಗಜೀವನ್ರಾಂ ಚರ್ಮ ಕೈಗಾರಿಕಾ ಅಭಿವೃದ್ದಿ ನಿಗಮ ನಿಯಮಿತದ ಅಧ್ಯಕ್ಷ ಮುಂಡರಗಿ ನಾಗರಾಜ್, ಬಳ್ಳಾರಿ ಗ್ರಾಮೀಣ ಶಾಸಕ ಬಿ.ನಾಗೇಂದ್ರ, ಸಿರುಗುಪ್ಪ ಶಾಸಕ ಬಿ.ಎಂ ನಾಗರಾಜ್, ಸಂಡೂರು ಶಾಸಕಿ ಈ.ಅನ್ನಪೂರ್ಣ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾಗರ ಪಾಲಿಕೆ ಮಹಾಪೌರರಾದ ಪಿ.ಗಾದೆಪ್ಪ, ಬಳ್ಳಾರಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು, ಕರ್ನಾಟಕ ಸ್ಟೇಟ್ ಮಿನಿರಲ್ಸ್ ಕಾರ್ಪೋರೇಷನ್ ಲಿಮಿಟೆಡ್ ನ ಉಪಾಧ್ಯಕ್ಷ ಹೆಚ್.ಲಕ್ಷ್ಮಣ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷ ಕೆ.ಇ.ಚಿದಾನಂದಪ್ಪ, ಸಮಾಜದ ಹಿರಿಯ ಮುಖಂಡ ಪಲ್ಲೇದ ಪಂಪಾಪತಿ ಸೇರಿದಂತೆ ಇತರರು ಭಾಗವಹಿಸುವರು.

ಪಾಲ್ತೂರಿನ ಚೆನ್ನವೀರ ಶಿವಾಚಾರ್ಯ ಮಹಾಸ್ವಾಮಿ ಅವರು ಜಯಂತಿ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಹಿಂದೂಸ್ಥಾನಿ ಗಾಯಕ ವಿ.ಎಂ ವೀರಭದ್ರಯ್ಯ ತಂಡದಿಂದ ವಚನ ಸಂಗೀತ ಕಾರ್ಯಕ್ರಮ ಇರಲಿದೆ.

ಮೆರವಣಿಗೆ:

ಜಯಂತಿ ಅಂಗವಾಗಿ ಅಂದು ಸಂಜೆ 04.30 ಗಂಟೆಗೆ ಮುನ್ಸಿಪಲ್ ಕಾಲೇಜು ಮೈದಾನದಿಂದ ಗಡಿಗಿ ಚೆನ್ನಪ್ಪ ವೃತ್ತ- ರೈಲ್ವೇ ನಿಲ್ದಾಣ ರಸ್ತೆ- ಹಳೆಯ ಜಿಲ್ಲಾಧಿಕಾರಿಗಳ ಕಚೇರಿ ಮುಂಭಾಗ- ಹೆಚ್.ಆರ್ ಗವಿಯಪ್ಪ ವೃತ್ತ- ಡಾ.ಜೋಳದರಾಶಿ ದೊಡ್ಡನ ಗೌಡ ರಂಗಮಂದಿರದ ವರೆಗೆ ಮೆರವಣಿಗೆ ನಡೆಯಲಿದೆ.

ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮಹಮ್ಮದ್ ಹಾರೀಸ್ ಸುಮೇರ್, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಪಿ.ಎಸ್ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಅವರು ತಿಳಿಸಿದ್ದಾರೆ.

---------------

ಹಿಂದೂಸ್ತಾನ್ ಸಮಾಚಾರ್ / ಜಿ.ಎಂ. ರೋಹಿಣಿ ಕುಮಾರ್


 rajesh pande