
ವಿಜಯಪುರ, 25 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಪ್ರಜಾಸೌಧ ಕಟ್ಟಡ ನಿರ್ಮಾಣಕ್ಕೆ ಗುರುತಿಸಲಾದ ಸ್ಥಳವನ್ನು ವಿರೋಧಿಸಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕು ಹೋರಾಟ ಸಮಿತಿ ವತಿಯಿಂದ ಇಂದು ಪಟ್ಟಣದಲ್ಲಿ ಸ್ವಯಂಪ್ರೇರಿತ ಬಂದ್ ಆಚರಿಸಿ ಪ್ರತಿಭಟನೆ ನಡೆಸಲಾಯಿತು.
ತಾಲೂಕು ಆಡಳಿತವು ಮೈಲೇಶ್ವರ ಗ್ರಾಮದ ಸಮೀಪ ಪ್ರಜಾಸೌಧ ಕಟ್ಟಡ ನಿರ್ಮಿಸಲು ಸ್ಥಳ ಗುರುತಿಸಿದ್ದು, ಈ ಸ್ಥಳ ತಾಳಿಕೋಟಿ ಪಟ್ಟಣದಿಂದ ಸುಮಾರು 4 ರಿಂದ 5 ಕಿಲೋಮೀಟರ್ ದೂರದಲ್ಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರು, ವಿಶೇಷವಾಗಿ ವೃದ್ಧರು, ಮಹಿಳೆಯರು ಹಾಗೂ ಅಂಗವಿಕಲರಿಗೆ ತೊಂದರೆ ಉಂಟಾಗುವ ಸಾಧ್ಯತೆ ಇದೆ ಎಂದು ಪ್ರತಿಭಟನಾಕಾರರು ಅಭಿಪ್ರಾಯಪಟ್ಟರು.
ಈಗ ಗುರುತಿಸಿರುವ ಸ್ಥಳವು ಸಾರ್ವಜನಿಕರಿಗೆ ಅನುಕೂಲಕರವಲ್ಲ. ಆದ್ದರಿಂದ ಪ್ರಜಾಸೌಧ ಕಟ್ಟಡವನ್ನು ತಾಳಿಕೋಟಿ ಪಟ್ಟಣದ ವ್ಯಾಪ್ತಿಯಲ್ಲಿಯೇ ನಿರ್ಮಿಸಬೇಕು ಎಂದು ಒತ್ತಾಯಿಸಿದರು.
ಬಂದ್ಗೆ ವ್ಯಾಪಾರಸ್ಥರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ಸಂಘ-ಸಂಸ್ಥೆಗಳ ಪ್ರತಿನಿಧಿಗಳು, ಬೀದಿಬದಿ ವ್ಯಾಪಾರಸ್ಥರು ಹಾಗೂ ಎಲ್ಲಾ ಸಮುದಾಯಗಳ ಮುಖಂಡರು ಬೆಂಬಲ ಸೂಚಿಸಿದರು. ಪಟ್ಟಣದಲ್ಲಿ ವ್ಯಾಪಾರ ವಹಿವಾಟು ಬಹುತೇಕ ಸ್ಥಗಿತಗೊಂಡಿದ್ದು, ಪ್ರತಿಭಟನೆ ಶಾಂತಿಯುತವಾಗಿ ನಡೆಯಿತು.
ಹಿಂದೂಸ್ತಾನ್ ಸಮಾಚಾರ್ / jyothi deshpande