ಆರೋಗ್ಯಕರ ಕರ್ನಾಟಕದತ್ತ ದೃಢ ಹೆಜ್ಜೆ:ಡಿ.ಕೆ.ಶಿವಕುಮಾರ್
ಬೆಂಗಳೂರು, 25 ಫೆಬ್ರವರಿ (ಹಿ.ಸ.): ಆ್ಯಂಕರ್: ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ''ಕುಸುಮ ಸಂಜೀವಿನಿ'' ಹಿಮೋಫಿಲಿಯಾ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆ್ಯಂಬುಲೆನ್ಸ್ ಸೇವೆಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉ
Dks


ಬೆಂಗಳೂರು, 25 ಫೆಬ್ರವರಿ (ಹಿ.ಸ.):

ಆ್ಯಂಕರ್:

ಬೆಂಗಳೂರಿನ ನೆಹರೂ ತಾರಾಲಯದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ 'ಕುಸುಮ ಸಂಜೀವಿನಿ' ಹಿಮೋಫಿಲಿಯಾ ರೋಗಿಗಳಿಗೆ ರೋಗ ನಿರೋಧಕ ಚಿಕಿತ್ಸೆ ಹಾಗೂ 108 ಆ್ಯಂಬುಲೆನ್ಸ್ ಸೇವೆಗಳ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಿಮೋಫಿಲಿಯಾ ಅಪರೂಪದ ಕಾಯಿಲೆ. ಹಿಮೋಫಿಲಿಯಾ ರೋಗಿಗಳಿಗೆ ತಿಂಗಳಿಗೆ ಒಂದು ಇಂಜೆಕ್ಷನ್‌ ಕೊಡಬೇಕು, ವರ್ಷಕ್ಕೆ ಒಬ್ಬ ರೋಗಿಗೆ 5 ಲಕ್ಷ ರೂ. ಖರ್ಚಾಗುತ್ತದೆ. ಜನರಿಗೆ ಅನುಕೂಲವಾಗಲಿ ಎಂದು ಹಿಮೋಫಿಲಿಯಾ ರೋಗ ನಿರೋಧಕ ಚಿಕಿತ್ಸೆ ನೀಡಲು ನಮ್ಮ ಸರ್ಕಾರ ಮುಂದೆ ಬಂದಿದೆ. ಇಡೀ ದೇಶದಲ್ಲಿ ಯಾವ ಸರ್ಕಾರವೂ ಮಾಡದ ಕೆಲಸವನ್ನೂ ನಮ್ಮ ಸರ್ಕಾರ ಮಾಡುತ್ತಿದೆ‌ ಎಂದರು.

ಹಿಮೋಫಿಲಿಯಾದಿಂದ ಬಳಲುತ್ತಿರುವ ಮಕ್ಕಳು ಹಾಗೂ ದೊಡ್ಡವರು ಯಾರೂ ಕೂಡ ವಿಶ್ವಾಸವನ್ನು ಕಳೆದುಕೊಳ್ಳಬಾರದು. ಈ ಕಾಯಿಲೆ ಬಂದ ಕೂಡಲೇ ನಮ್ಮ ಕೈಯಿಂದ ಏನೂ ಮಾಡಲು ಆಗುವುದಿಲ್ಲ ಎಂಬ ಭಾವನೆ ಬರಬಾರದು. ಎಷ್ಟೇ ಖರ್ಚಾದರೂ ಮಕ್ಕಳ ಜೊತೆಗೆ ಹಾಗೂ ಪೋಷಕರ ಜೊತೆಗೆ ಸರ್ಕಾರ ಇದೆ. ನಿಮ್ಮ ಬದುಕಿಗೆ ಹೊಸ ಶಕ್ತಿ ತುಂಬುವುದೇ ಸರ್ಕಾರದ ಉದ್ದೇಶವಾಗಿದೆ.

ನಮ್ಮ ಆರೋಗ್ಯ ಇಲಾಖೆ ಇಡೀ ದೇಶಕ್ಕೆ ಮಾದರಿಯಾಗಿದೆ. ಹಿಮೋಫಿಲಿಯಾ ರೋಗಿಗಳಿಗೆ ಚಿಕಿತ್ಸೆ ನೀಡಲು ಮುಂದಾಗುವ ಮೂಲಕ ಕ್ರಾಂತಿಕಾರಕ ಹೆಜ್ಜೆಯನ್ನಿಟ್ಟಿದೆ ಎಂದರು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande