ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
ಶಿವಮೊಗ್ಗ, 25 ಫೆಬ್ರವರಿ (ಹಿ.ಸ.): ಆ್ಯಂಕರ್: ಶಿವಮೊಗ್ಗ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಶುಲ್ಕ ಮರುಪಾವತಿ ಸೌಲ
ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ


ಶಿವಮೊಗ್ಗ, 25 ಫೆಬ್ರವರಿ (ಹಿ.ಸ.):

ಆ್ಯಂಕರ್:

ಶಿವಮೊಗ್ಗ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಹಾಗೂ ಪ್ರವರ್ಗ-1 ಅಲೆಮಾರಿ/ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಂದ 2025-26 ನೇ ಸಾಲಿಗೆ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮಾ. 05 ರವರೆಗೆ ವಿಸ್ತರಿಸಲಾಗಿದೆ.

ಆಸಕ್ತರು https://ssp.postmatric.karnataka.gov.in ಮೂಲಕ ಮಾ. 05 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂ.: 8050770004, ತಂತ್ರಾಂಶ ಸಹಾಯವಾಣಿ 1902 ನ್ನು ಸಂಪರ್ಕಿಸುವುದು.

---------------

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande