ವೀರ್ ಸಾವರ್ಕರ್ ಪುಣ್ಯತಿಥಿ ; ಅಮಿತ್ ಶಾ ಗೌರವ ನಮನ
ನವದೆಹಲಿ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಚಿಂತಕ ವೀರ್ ಸಾವರ್ಕರ್ ಅವರ ಪುಣ್ಯತಿಥಿ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವ ನಮನ ಸಲ್ಲಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸ್ವಾತಂತ್ರ್ಯವೀರ ಸಾವರ್ಕರ್ ಅವರು ಬ್ರಿಟಿಷರ
Savarkar


ನವದೆಹಲಿ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಸ್ವಾತಂತ್ರ್ಯ ಹೋರಾಟಗಾರ ಹಾಗೂ ಚಿಂತಕ ವೀರ್ ಸಾವರ್ಕರ್ ಅವರ ಪುಣ್ಯತಿಥಿ ಅಂಗವಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಗೌರವ ನಮನ ಸಲ್ಲಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ಸ್ವಾತಂತ್ರ್ಯವೀರ ಸಾವರ್ಕರ್ ಅವರು ಬ್ರಿಟಿಷರ ಆಳ್ವಿಕೆಯಿಂದ ರಾಜಕೀಯ ಸ್ವಾತಂತ್ರ್ಯ ಹಾಗೂ ಸಾಂಸ್ಕೃತಿಕ ಸ್ವಾತಂತ್ರ್ಯಕ್ಕಾಗಿ ಏಕಕಾಲದಲ್ಲಿ ಹೋರಾಡಿದ ಮಹತ್ವದ ನಾಯಕರಾಗಿದ್ದರು ಎಂದು ಅಮಿತ್ ಶಾ ತಿಳಿಸಿದ್ದಾರೆ. ಅವರ ಕ್ರಾಂತಿಕಾರಿ ವಿಚಾರಧಾರೆಗಳು ಸ್ವಾತಂತ್ರ್ಯ ಚಳವಳಿಗೆ ಸೈದ್ಧಾಂತಿಕ ಬಲ ಒದಗಿಸಿದವು ಎಂದು ಅವರು ಸ್ಮರಿಸಿದ್ದಾರೆ.

ಒಂದೆಡೆ ತಮ್ಮ ಲೇಖನಗಳು ಮತ್ತು ಭಾಷಣಗಳ ಮೂಲಕ ರಾಷ್ಟ್ರಭಕ್ತಿ ಜಾಗೃತಿ ಮೂಡಿಸಿದರೆ, ಮತ್ತೊಂದೆಡೆ ಇಂಗ್ಲೆಂಡ್ನಲ್ಲಿ ನಡೆಸಿದ ಧೈರ್ಯಶಾಲಿ ಚಟುವಟಿಕೆಗಳ ಮೂಲಕ ಯುವಕರಿಗೆ ಪ್ರೇರಣೆಯಾದರು ಎಂದು ಶಾ ಅಭಿಪ್ರಾಯಪಟ್ಟಿದ್ದಾರೆ.

ಅಸ್ಪೃಶ್ಯತೆ ನಿರ್ಮೂಲನೆ ಹಾಗೂ ಮಹಿಳಾ ಶಿಕ್ಷಣದ ಉತ್ತೇಜನಕ್ಕಾಗಿ ಜೀವನಪರ್ಯಂತ ಶ್ರಮಿಸಿದ ಸಾವರ್ಕರ್ ಅವರ ತ್ಯಾಗ, ಸಮರ್ಪಣೆ ಮತ್ತು ಶೌರ್ಯ ದೇಶಭಕ್ತರಿಗೆ ಸದಾ ದಾರಿದೀಪವಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande