
ಹಾಸನ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಹಾಸನ ಜಿಲ್ಲೆಯ ಸಕಲೇಶಪುರ ಪುರಸಭಾ ವತಿಯಿಂದ ರಾಜ್ಯ ಹಣಕಾಸು ಯೋಜನೆಯ ಶೇ.24.10, ಶೇ.7.25% ಮತ್ತು ಶೇ.5.00 ರ ನಿಧಿಯಡಿ ವಿವಿಧ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಸೂಕ್ತ ದಾಖಲೆಗಳೊಂದಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಪರಿಶಿಷ್ಟ ಜಾತಿಯ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ಶೇ.7.5% ರ ನಿಧಿಯಡಿ ಹಿಂದುಳಿದ ಇತರೆಜನಾಂಗದವರ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನ, ಶೇ.5% ರ ನಿಧಿಯಡಿ ಫಲಾನುಭವಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಸಹಾಯಧನಕ್ಕಗಿ ಅರ್ಜಿಗಳನ್ನು ಆಸಕ್ತರು ಮಾ.10 ರೊಳಗೆ ಅರ್ಜಿ ಸಲ್ಲಿಸಬಹುದು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa