
ಬೆಂಗಳೂರು, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ರಾಷ್ಟ್ರ ರಾಜಧಾನಿ ದೆಹಲಿಯಂತೆ ಬೆಂಗಳೂರಿನ ವಾಯು ಗುಣಮಟ್ಟ ಕ್ಷೀಣಿಸದಂತೆ ತುರ್ತು ಕ್ರಮ ಕೈಗೊಳ್ಳಲಾಗುವುದು ಎಂದು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ರಾಜಾಜಿನಗರ ಶಾಸಕ ಸುರೇಶ್ ಕುಮಾರ್ ಅವರ ಮನವಿಯ ಮೇರೆಗೆ ನಡೆದ ಸಭೆಯಲ್ಲಿ ನಗರದಲ್ಲಿ ವಾಯು, ಜಲ ಹಾಗೂ ಶಬ್ದ ಮಾಲಿನ್ಯ ಹೆಚ್ಚುತ್ತಿರುವುದರ ಬಗ್ಗೆ ಚರ್ಚಿಸಲಾಯಿತು. ವಾಯು ಗುಣಮಟ್ಟ ಸೂಚ್ಯಂಕ 100 ದಾಟಿದರೆ ಸಂಬಂಧಿತ ಸ್ಥಳೀಯ ಸಂಸ್ಥೆಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳದಿದ್ದರೆ ಕಾನೂನು ಕ್ರಮ ಜರುಗಿಸಲು ಸಚಿವರು ಸೂಚಿಸಿದರು.
ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧ್ಯಕ್ಷತೆಯಲ್ಲಿ ಶೀಘ್ರವೇ ಎಲ್ಲ ಜನಪ್ರತಿನಿಧಿಗಳ ಸಭೆ ನಡೆಸಲಾಗುವುದು. ಏಕಬಳಕೆ ಪ್ಲಾಸ್ಟಿಕ್ ನಿಯಂತ್ರಣ ಮತ್ತು ತ್ಯಾಜ್ಯ ಶುದ್ಧೀಕರಣ ಘಟಕಗಳ ಸ್ಥಿತಿಗತಿ ಕುರಿತು ಒಂದು ತಿಂಗಳೊಳಗೆ ವರದಿ ಸಲ್ಲಿಸಲು ಇಲಾಖೆಗೆ ನಿರ್ದೇಶನ ನೀಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa