ಸಹಾಯಧನಕ್ಕಾಗಿ ಅರ್ಜಿ ಆಹ್ವಾನ
ದಾವಣಗೆರೆ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್
ಸಹಾಯಧನಕ್ಕಾಗಿ ಅರ್ಜಿ ಆಹ್ವಾನ


ದಾವಣಗೆರೆ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಪ್ರಸಕ್ತ ಸಾಲಿನಲ್ಲಿ ಎಸ್.ಸಿ.ಎಸ್.ಪಿ, ಟಿ.ಎಸ್.ಪಿ ಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಣ್ಣ ಉದ್ಯಮಿದಾರರನ್ನು ಉತ್ತೇಜಿಸಲು ಒಂದು ತಿಂಗಳ ಕೌಶಲ್ಯಾಭಿವೃದ್ದಿ ತರಬೇತಿ ನೀಡಿ ಹಾಗೂ ತರಬೇತಿ ಪಡೆದ ಅರ್ಹ ಅಭ್ಯರ್ಥಿಗಳಿಗೆ ಮೊಬೈಲ್ ಕ್ಯಾಂಟಿನ್ ಸಹಾಯಧನವನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿದ್ದು 20 ರಿಂದ 55 ವರ್ಷದೊಳಗಿರಬೇಕು. ಅಭ್ಯರ್ಥಿಗಳು 10ನೇ ತರಗತಿ ಪಾಸಾದ ಪ್ರಮಾಣ ಪತ್ರ ಹಾಗೂ ಖಾಯಂ ಲಘು ವಾಹನ ಚಾಲನಾ ಪರವಾನಗಿ (ಡಿ.ಎಲ್) ನಕಲು ಪ್ರತಿಯನ್ನು ಸಲ್ಲಿಸಬೇಕು. ಅರ್ಜಿಯನ್ನು ಪ್ರವಾಸೋದ್ಯಮ ಇಲಾಖೆಯಿಂದ ಪಡೆದು ಭರ್ತಿ ಮಾಡಿದ ಅರ್ಜಿಯನ್ನು ದಾಖಲೆಗಳೊಂದಿಗೆ ಮಾರ್ಚ್ 13 ರೊಳಗಾಗಿ ಒಳಗಾಗಿ ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ದಾವಣಗೆರೆ ಇವರಿಗೆ ದ್ವಿ-ಪ್ರತಿಯಲ್ಲಿ ಭರ್ತಿಯಲ್ಲಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-230123 ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ಕಾವ್ಯಾ ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande