
ಬೆಂಗಳೂರು, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಕರ್ನಾಟಕದಲ್ಲಿ 'ಆರೋಗ್ಯ ಹಕ್ಕು ಕಾಯ್ದೆ'ಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಇಂದು ಪ್ರಸಿದ್ಧ ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ದ್ರೆಝೆ ಅವರೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ವಿಕಾಸ ಸೌಧದಲ್ಲಿ ಮಹತ್ವದ ಸಮಾಲೋಚನೆ ನಡೆಸಿದರು.
ಈ ಸಂದರ್ಭದಲ್ಲಿ ಕಾಯ್ದೆಯ ರೂಪುರೇಷೆಗಳು ಹಾಗೂ ಜಾಗತಿಕ ಮಟ್ಟದ ಅನುಭವಗಳ ಬಗ್ಗೆ ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಯಿತು.
ಈ ಮಹತ್ವಾಕಾಂಕ್ಷಿ ಕಾಯ್ದೆಯನ್ನು ಜಾರಿಗೆ ತರಲು ಈಗಾಗಲೇ ಇಲಾಖಾ ಮಟ್ಟದಲ್ಲಿ ಪೂರ್ವಸಿದ್ಧತೆಗಳು ಆರಂಭವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಅನುಮೋದನೆಗೆ ಮುನ್ನ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.
ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಬದಲಾವಣೆಗಳಿಗೆ ಜೀನ್ ದ್ರೆಝೆ ಅವರು ಕಾಲಕಾಲಕ್ಕೆ ಅಮೂಲ್ಯ ಸಲಹೆಗಳನ್ನು ನೀಡುವಂತೆ ವಿನಂತಿಸಲಾಗಿದ್ದು, ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಆರೋಗ್ಯಪೂರ್ಣ ಕರ್ನಾಟಕ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ ಗುಂಡೂರಾವ್ ತಿಳಿಸಿದ್ದಾರೆ.
ಕರ್ನಾಟಕದಲ್ಲಿ 'ಆರೋಗ್ಯ ಹಕ್ಕು ಕಾಯ್ದೆ'ಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಇಂದು ಪ್ರಸಿದ್ಧ ಅಭಿವೃದ್ಧಿ ಅರ್ಥಶಾಸ್ತ್ರಜ್ಞ ಜೀನ್ ದ್ರೆಝೆ ಅವರೊಂದಿಗೆ ವಿಕಾಸಸೌಧದಲ್ಲಿ ಮಹತ್ವದ ಸಮಾಲೋಚನೆ ನಡೆಸಿದೆವು.
ಈ ಸಂದರ್ಭದಲ್ಲಿ ಕಾಯ್ದೆಯ ರೂಪುರೇಷೆಗಳು ಹಾಗೂ ಜಾಗತಿಕ ಮಟ್ಟದ ಅನುಭವಗಳ ಬಗ್ಗೆ ಸುಮಾರು 45 ನಿಮಿಷಗಳ ಕಾಲ ಸುದೀರ್ಘ ಚರ್ಚೆ ನಡೆಯಿತು.
ಈ ಮಹತ್ವಾಕಾಂಕ್ಷಿ ಕಾಯ್ದೆಯನ್ನು ಜಾರಿಗೆ ತರಲು ಈಗಾಗಲೇ ಇಲಾಖಾ ಮಟ್ಟದಲ್ಲಿ ಪೂರ್ವಸಿದ್ಧತೆಗಳು ಆರಂಭವಾಗಿದ್ದು, ಮುಖ್ಯಮಂತ್ರಿಗಳು ಹಾಗೂ ಸಚಿವ ಸಂಪುಟದ ಅನುಮೋದನೆಗೆ ಮುನ್ನ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಆರೋಗ್ಯ ಇಲಾಖೆಯಲ್ಲಿ ನಡೆಯುತ್ತಿರುವ ವ್ಯವಸ್ಥಿತ ಬದಲಾವಣೆಗಳಿಗೆ ಜೀನ್ ದ್ರೆಝೆ ಅವರು ಕಾಲಕಾಲಕ್ಕೆ ಅಮೂಲ್ಯ ಸಲಹೆಗಳನ್ನು ನೀಡುವಂತೆ ವಿನಂತಿಸಲಾಗಿದ್ದು, ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಮೂಲಕ ಆರೋಗ್ಯಪೂರ್ಣ ಕರ್ನಾಟಕ ನಿರ್ಮಾಣಕ್ಕೆ ನಾವು ಬದ್ಧರಾಗಿದ್ದೇವೆ.
ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ ಹಾಗೂ ಸಾರ್ವತ್ರಿಕ ಆರೋಗ್ಯ ಆಂದೋಲನದ ಸದಸ್ಯರು ಉಪಸ್ಥಿತರಿದ್ದರು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa