
ದಾವಣಗೆರೆ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ದಾವಣಗೆರೆ ಸಮೀಪದ ತೋಳಹುಣಸೆ ರೈಲ್ವೆ ನಿಲ್ದಾಣದಲ್ಲಿ ಮೋಟಾರ್ ಟ್ರ್ಯಾಲಿ ಮೂಲಕ ದಾವಣಗೆರೆ–ತುಮಕೂರು ಹೊಸ ರೈಲ್ವೆ ಮಾರ್ಗದ ಜೊತೆಗೆ ತೋಳಹುಣಸೆ–ಆನಗೋಡು ಹಾಗೂ ಆನಗೋಡು–ಹೆಬ್ಬಾಳು ಸಂಪರ್ಕ ಮಾರ್ಗಗಳ ಸ್ಥಳ ಪರಿಶೀಲನೆ ಕೈಗೊಳ್ಳಲಾಯಿತು.
ಈ ಪರಿಶೀಲನಾ ಕಾರ್ಯಕ್ರಮದಲ್ಲಿ ಕೇಂದ್ರ ರೈಲ್ವೆ ಸಚಿವರಾದ ವಿ. ಸೋಮಣ್ಣ, ಸಂಸದೆ ಪ್ರಭಾ ಮಲ್ಲಿಕಾರ್ಜುನ, ಶಾಸಕರಾದ ಕೆ.ಎಸ್. ಬಸವಂತಪ್ಪನವರು, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಗಿತ್ತೆ ಮಾಧವ ವಿಠಲರಾವ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಕಾಮಗಾರಿಗಳ ಪ್ರಗತಿ ಹಾಗೂ ಭವಿಷ್ಯ ಕಾರ್ಯಯೋಜನೆಗಳ ಕುರಿತು ಸಮಗ್ರ ಅವಲೋಕನ ನಡೆಸಲಾಯಿತು.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa