ಪ್ರಧಾನಿ ಮೋದಿಗೆ ‘ಸ್ಪೀಕರ್ ಆಫ್ ದಿ ನೆಸ್ಸೆಟ್’ ಗೌರವ ; ವಿಜಯೇಂದ್ರ ಅಭಿನಂದನೆ
ಬೆಂಗಳೂರು, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಇಸ್ರೇಲ್ ನ ಅತ್ಯುನ್ನತ ಸಂಸದೀಯ ಗೌರವವಾದ ‘ಸ್ಪೀಕರ್ ಆಫ್ ದಿ ನೆಸ್ಸೆಟ್’ ಗೌರವವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂದ ನೆ ಸಲ್ಲಿಸಿದ್ದಾರೆ. ಈ ಕುರಿತ
Pm


ಬೆಂಗಳೂರು, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಇಸ್ರೇಲ್ ನ ಅತ್ಯುನ್ನತ ಸಂಸದೀಯ ಗೌರವವಾದ ‘ಸ್ಪೀಕರ್ ಆಫ್ ದಿ ನೆಸ್ಸೆಟ್’ ಗೌರವವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರದಾನ ಮಾಡಿರುವ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿನಂದ ನೆ ಸಲ್ಲಿಸಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಶುಭಾಶಯ ಸಂದೇಶ ಹಂಚಿಕೊಂಡಿರುವ ಅವರು, ಪ್ರಧಾನಿ ಮೋದಿಯವರ ದೂರದೃಷ್ಟಿ ಹಾಗೂ ನಿರ್ಣಾಯಕ ರಾಜತಾಂತ್ರಿಕತೆ ಜಾಗತಿಕ ಮಟ್ಟದಲ್ಲಿ ಭಾರತಕ್ಕೆ ಹೆಚ್ಚುತ್ತಿರುವ ಗೌರವವನ್ನು ಪ್ರತಿಬಿಂಬಿಸುತ್ತಿದೆ ಎಂದು ಹೇಳಿದ್ದಾರೆ. ಇದು ಭಾರತಕ್ಕೆ ಹೆಮ್ಮೆಯ ಹಾಗೂ ಐತಿಹಾಸಿಕ ಕ್ಷಣವಾಗಿದ್ದು, ದೇಶದ ಪ್ರಭಾವವನ್ನು ವಿಶ್ವ ವೇದಿಕೆಯಲ್ಲಿ ಮತ್ತಷ್ಟು ಬಲಪಡಿಸುವ ಸಾಧನೆಯಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಈ ಮನ್ನಣೆ, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಭಾರತ–ಇಸ್ರೇಲ್ ಸಂಬಂಧಗಳು ಹೊಸ ಎತ್ತರಕ್ಕೆ ಏರಿರುವುದಕ್ಕೆ ಸಾಕ್ಷಿಯಾಗಿದೆ. ಉಭಯ ದೇಶಗಳ ನಡುವೆ ತಂತ್ರಜ್ಞಾನ, ರಕ್ಷಣಾ, ಕೃಷಿ ಹಾಗೂ ಆವಿಷ್ಕಾರ ಕ್ಷೇತ್ರಗಳಲ್ಲಿ ಬೆಳೆದಿರುವ ಬಲವಾದ ಸಹಭಾಗಿತ್ವವನ್ನು ಇದು ಪ್ರತಿನಿಧಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande