
ನವದೆಹಲಿ, 26 ಫೆಬ್ರವರಿ (ಹಿ.ಸ.) :
ಆ್ಯಂಕರ್ : ಮಹಾನ್ ಕ್ರಾಂತಿಕಾರಿ ವೀರ ಸಾವರ್ಕರ್ ಅವರ ಪುಣ್ಯತಿಥಿಯಂದು ಅವರಿಗೆ ಪ್ರಧಾನಿ ನರೇಂದ್ರ ಮೋದಿ ಗೌರವಪೂರ್ವಕ ನಮನ ಸಲ್ಲಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸನಲ್ಲಿ ಸಂದೇಶ ಹಂಚಿಕೊಂಡಿರುವ ಅವರು, ದೇಶವನ್ನು ಗುಲಾಮಗಿರಿಯ ಸಂಕೋಲೆಯಿಂದ ಮುಕ್ತಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ವ್ಯಕ್ತಿತ್ವ ಮತ್ತು ಸಾಧನೆಗಳು ಪ್ರತಿ ಪೀಳಿಗೆಗೂ ರಾಷ್ಟ್ರ ಸೇವೆ ಮಾಡಲು ಸ್ಫೂರ್ತಿ ನೀಡುತ್ತಲೇ ಇರುತ್ತವೆ ಎಂದು ತಿಳಿಸಿದ್ದಾರೆ.
ಹಿಂದೂಸ್ತಾನ್ ಸಮಾಚಾರ್ / Rakesh Mahadevappa