ಮಾ. 01  ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ
ಶಿವಮೊಗ್ಗ, 26 ಫೆಬ್ರವರಿ (ಹಿ.ಸ.) : ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಜಂಗಮ ಹಾಗೂ ಬೇಡ ಜಂಗಮ ಸಮಾಜ ಇವರುಗಳ ಸಂಯಕ್ತಾಶ್ರಯದಲ್ಲಿ ಮಾ.01 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರ
ಮಾ. 01  ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ


ಶಿವಮೊಗ್ಗ, 26 ಫೆಬ್ರವರಿ (ಹಿ.ಸ.) :

ಆ್ಯಂಕರ್ : ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಶಿವಮೊಗ್ಗ ಹಾಗೂ ಜಿಲ್ಲಾ ಜಂಗಮ ಹಾಗೂ ಬೇಡ ಜಂಗಮ ಸಮಾಜ ಇವರುಗಳ ಸಂಯಕ್ತಾಶ್ರಯದಲ್ಲಿ ಮಾ.01 ರ ಬೆಳಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ- ಯುಗಮಾನೋತ್ಸವವನ್ನು ಏರ್ಪಡಿಸಲಾಗಿದೆ.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು.

ಶಿವಮೊಗ್ಗದ ಜ್ಞಾನದೀಪ ಶಾಲೆಯ ಕನ್ನಡ ಉಪನ್ಯಾಸಕ ತುರುವನೂರು ಮಲ್ಲಿಕಾರ್ಜುನ ಎಂ.ವಿ. ಇವರಿಂದ ವಿಶೇಷ ಉಪನ್ಯಾಸ ಆಯೋಜಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಹಿಂದೂಸ್ತಾನ್ ಸಮಾಚಾರ್ / Rakesh Mahadevappa


 rajesh pande